ಮುಸ್ಲಿಮರು ಕೆತ್ತನೆ ಮಾಡಿದ ವಿಗ್ರಹ ಪ್ರತಿಷ್ಠಾಪನೆ ಮಾಡದಂತೆ ಅಭಿಯಾನ…

73
firstsuddi

ಮಂಡ್ಯ : ಹಿಜಾಬ್, ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಹಲಾಲ್, ಆಜಾನ್, ಮಾವಿನಹಣ್ಣಿನ ಅಭಿಯಾನದ ಬಳಿಕ ಇದೀಗ ಮತ್ತೊಂದು ಅಭಿಯಾನ ಶುರುವಾಗಿದೆ. ಮುಸ್ಲಿಮರು ಕೆತ್ತನೆ ಮಾಡಿದ ವಿಗ್ರಹ ಪ್ರತಿಷ್ಠಾಪಿಸದಂತೆ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯದ ಸ್ಥಾನಿಕ ಶ್ರೀನಿವಾಸನ್ ನೇತೃತ್ವದಲ್ಲಿ ಅಭಿಯಾನ ಶುರುವಾಗಿದೆ.

ಮುಸ್ಲಿಮರು ದೇವರ ವಿಗ್ರಹಗಳನ್ನ ಕೆತ್ತನೆ ಮಾಡುವುದು ಸರಿಯಲ್ಲ. ಅದನ್ನು ಶಾಸ್ತ್ರವು ಕೂಡ ಒಪ್ಪುವುದಿಲ್ಲ. ಹಿಂದಿನಿಂದಲೂ ಊರಿನ ಯಜಮಾನರ ಮಾರ್ಗದರ್ಶನದಲ್ಲಿ ಮೂರ್ತಿ ಕೆತ್ತನೆಯಾಗುತ್ತಾ ಬಂದಿದೆ. ಶಾಸ್ರ್ತ ಪ್ರಕಾರವಾಗಿ ವಿಶ್ವಕರ್ಮ ಜನಾಂಗದವರೇ ಮೂರ್ತಿಯನ್ನು ಕೆತ್ತನೆ ಮಾಡಬೇಕು. ಹೀಗಾಗಿ ಮುಂದೆ ಮುಸ್ಲಿಮರು ಕೆತ್ತನೆ ಮಾಡಿದ ವಿಗ್ರಹವನ್ನ ಯಾವ ದೇವಾಲಯದಲ್ಲಿಯೂ ಪ್ರತಿಷ್ಠಾಪನೆ ಮಾಡದಂತೆ ಅಭಿಯಾನ ಮಾಡುತ್ತೇವೆ ಎಂದು ಶ್ರೀನಿವಾಸನ್ ಹೇಳಿದ್ದಾರೆ.