ಹಾವೇರಿ : ಮುಸ್ಲಿಮರು ರಾಮ ಮಂದಿರ ಧ್ವಂಸ ಮಾಡುವ ಕನಸನ್ನು ಕಾಣಬೇಡಿ. ಹಿಂದೂ ಸಮಾಜ ಜಾಗೃತವಿದೆ, ಸಂವಿಧಾನವಿದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ರಾಮ ಮಂದಿರವನ್ನು ಬ್ಲಾಸ್ಟ್ ಮಾಡಬೇಕು ಎಂಬ ಪಿಎಫ್ ಐನವರ ಸಂಚು ಬೆಳಕಿಗೆ ಬಂದಿದೆ. ರಾಮ ಮಂದಿರವನ್ನು ಬ್ಲಾಸ್ಟ್ ಮಾಡಲು ಸಂಚು ರೂಪಿಸಿದ ಐವರನ್ನು ಮಹಾರಾಷ್ಟ್ರದ ಎಟಿಎಸ್ ನವರು ಬಂಧಿಸಿದ್ದು ಮತ್ತು ಪಿಎಫ್ಐ ಸಂಘಟನೆ ಬ್ಯಾನ್ ಮಾಡಿದ್ದು ಸ್ವಾಗತಾರ್ಹ ಎಂದರು.
ಬಾಬರ್ ದೇವಸ್ಥಾನವನ್ನು ಒಡೆದು ಮಸೀದಿ ಕಟ್ಟಿದ್ದಾರೆ ಎನ್ನುವುದನ್ನು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಅದನ್ನು ಧಿಕ್ಕರಿಸಿ ಬಾಬ್ರಿ ಮಸೀದಿ ಕಟ್ತೀವಿ ಅನ್ನೋದು ಡೇಂಜರಸ್ ಮಾನಸಿಕತೆ ಇದೆ. ಈ ದೇಶದ ಮಣ್ಣಿನ ಅನ್ನ ತಿಂದು ಭಾರತದ ಇಸ್ಲಾಮಿನ ಕನಸು ಕಾಣ್ತಿರೋದು ಸರಿಯಲ್ಲ. ನಿಮ್ಮ ಬಣ್ಣ ಬಯಲಾಗಿದೆ ಎಂದು ಕಿಡಿಕಾರಿದರು.
ಹಲಾಲ್ ಮುಕ್ತ ದೀಪಾವಳಿ ಅಭಿಯಾನ ಶುರು ಮಾಡಿದ್ದೇವೆ. ಈಗಾಗಲೇ ರಾಜ್ಯದಲ್ಲಿ ಎಲ್ಲ ಹಿಂದೂ ಸಂಘಟನೆಗಳ ಒಕ್ಕೂಟದಿಂದ ಅಭಿಯಾನ ಮಾಡುತ್ತಿದ್ದೇವೆ. ಈಗ ಎಲ್ಲ ಪದಾರ್ಥಗಳಲ್ಲೂ ಹಲಾಲ್ ಸರ್ಟಿಫಿಕೇಟ್ ಇದೆ. ಈ ಹಣ ಭಯೋತ್ಪಾದಕರು, ಮುಸ್ಲಿಂ ಗೂಂಡಾಗಳಿಗೆ ಹೋಗ್ತಿದೆ. ಮುಸ್ಲಿಮರ ಜೊತೆ ಯಾವುದೇ ವ್ಯಾಪಾರ ವ್ಯವಹಾರ ಮಾಡಬಾರದು ಎಂದು ಮುತಾಲಿಕ್ ಆಗ್ರಹಿಸಿದರು.
ಕಾಂತಾರ ಚಿತ್ರ ಇಡೀ ಕರ್ನಾಟಕ ಮಾತ್ರವಲ್ಲ, ದೇಶದಲ್ಲೇ ಕನ್ನಡದ ಡಿಂಡಿಮ ಬಾರಿಸುತ್ತಿದೆ. ಕನ್ನಡದ ನೆಲ, ಸಂಸ್ಕೃತಿಯನ್ನು ಇಡೀ ದೇಶದ ಮೂಲೆ ಮೂಲೆಗೆ ತೆಗೆದುಕೊಂಡು ಹೋಗಿದ್ದಾರೆ. ಇದು ಹೆಮ್ಮೆಯ ವಿಷಯ. ಆದರೆ ಒಬ್ಬ ದುಷ್ಟ, ಒಬ್ಬ ನೀಚ, ಒಬ್ಬ ನಾಸ್ತಿಕವಾದಿ ನಟ ಚೇತನ್ ಕಲ್ಲು ಹಾಕುವ ಪ್ರಯತ್ನ ಮಾಡಿದ್ದು ಖಂಡನೀಯ. ನಮ್ಮ ಹಿಂದೂ ಸಮಾಜ ಒಡೆಯುವ ಪ್ರಕ್ರಿಯೆ ಮಾಡ್ತಿರೋದು ಸರಿಯಲ್ಲ ಎಂದು ಕಿಡಿಕಾರಿದರು.