ಮೂಡಬಿದರೆ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ…

126
firstsuddi

ಮಂಗಳೂರು: ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಬಿದರೆ ವ್ಯಾಪ್ತಿಯ ಕಡಂದಲೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯು ಕಡಂದಲೆ ನಿವಾಸಿಯಾಗಿದ್ದು ಮುಂಬೈ ನಿಂದ ವಾಪಾಸು ಬಂದು ಕಡಂದೆಲೆಯ ಶಾಲೆಯಲ್ಲಿ ಕ್ವಾರಂಟೈನ್ ನಲ್ಲಿ ಇದ್ದರು.  ಇಂದು ಮುಂಜಾನೆ ಶಾಲೆಯಲ್ಲಿನ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ ಮಾಡಿರುವುದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿರುತ್ತದೆ. ಸ್ಥಳಕ್ಕೆ ಮಂಗಳೂರು ಉಪವಿಭಾಗಾಧಿಕಾರಿ ಮದನ್ ಭೇಟಿ ನೀಡಿರುತ್ತಾರೆ.