ಮೂಡಿಗೆರೆ : ಆಶಾ ಕಾರ್ಯಕರ್ತೆಯರಿಗೆ 12 ಸಾವಿರ ರೂ. ಮಾಸಿಕ ವೇತನ ಖಾತರಿ ಪಡಿಸಬೇಕೆಂದು ಮತ್ತು ಕೋವಿಡ್-19 ವಿರುದ್ಧದ ಹೋರಾಟಕ್ಕೆ ಅಗತ್ಯವಿರುವ ಸುರಕ್ಷಣಾ ಸಾಮಾಗ್ರಿಗಳನ್ನು ನೀಡಬೇಕು. ಕೋವಿಡ್-19 ಸೋಂಕಿಗೆ ಒಳಗಾದ ಆಶಾ ಕಾರ್ಯಕರ್ತೆಯರಿಗೆ ಸಂಪೂರ್ಣ ಉಚಿತ ಚಿಕಿತ್ಸೆಯನ್ನು ಸರ್ಕಾರ ಭರಿಸಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಮೂಡಿಗೆರೆ ಘಟಕದ ವತಿಯಿಂದ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.
ಈ ಕುರಿತು ಮಾತನಾಡಿದ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಕಾರ್ಯದರ್ಶಿ ಮೈನಾ ಅವರು ಕೊರೊನಾ ಸಂಕಷ್ಟದ ಸಮಯದಲ್ಲಿ ಜೀವದ ಹಂಗನ್ನು ತೊರೆದು ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ಸರ್ಕಾರ ನಿರ್ಲಕ್ಷಿಸುತ್ತಿರುವುದು ಖಂಡನೀಯ. ಕೊರೊನಾ ವಾರಿಯರ್ಸ್‍ಗಳ ನ್ಯಾಯಯುತ ಬೇಡಿಕೆಗಳನ್ನು ಈ ಕೂಡಲೇ ಈಡೇರಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.










