ಮೂಡಿಗೆರೆ : ಎರಡು ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಗಬ್ಗಲ್ ಗ್ರಾಮದಲ್ಲಿ ನಡೆದಿದೆ. ಈ ಭೀಕರ ರಸ್ತೆ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಬೈಕ್ ಸವಾರ ಶಿವಾಜಿರಾವ್ ಎಂಬುವವರಿಗೆ ಗಂಭಿರ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಾತ್ರೆ ವ್ಯಾಪಾರಿಯಾಗಿದ್ದ ಶಿವಾಜಿರಾವ್ ಅವರು ಬೈಕಿನಲ್ಲಿ ಪಾತ್ರೆ ತುಂಬಿಸಿಕೊಂಡು ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಇನ್ನೊಂದು ಬೈಕ್ ಶಿವಾಜಿರಾವ್ ಅವರ ಬೈಕ್‍ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಶಿವಾಜಿರಾವ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕುರಿತು ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.









