ಮೂಡಿಗೆರೆ : ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ…

247
firstsuddi

ಮೂಡಿಗೆರೆ : ಕೃಷಿ ಇಲಾಖೆಯ ಆತ್ಮ ಯೋಜನೆಯಡಿಯಲ್ಲಿ ತಾಲ್ಲೂಕು ಮಟ್ಟದಲ್ಲಿ ಕೃಷಿ ಚಟುವಟಿಕೆಗಳಲ್ಲಿ (ತೋಟಗಾರಿಕೆ, ಪಶು ಸಂಗೋಪನೆ, ಮೀನುಗಾರಿಕೆ) ಸಾಧನೆ ಮಾಡಿದ ರೈತರಿಗೆ ಪ್ರಶಸ್ತಿ ನೀಡಲು ಅವಕಾಶವಿದ್ದು, ಆಸಕ್ತರು ಇದೇ ತಿಂಗಳ 31 ರೊಳಗೆ ಮೂಡಿಗೆರೆ ಕೃಷಿ ಇಲಾಖೆ ಕಚೇರಿಗೆ ಅಥವಾ ಆಯಾ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಬಣಕಲ್ ಸಹಾಯಕ ಕೃಷಿ ಅಧಿಕಾರಿ ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.