ಕೊಟ್ಟಿಗೆಹಾರ : ಜಾವಳಿ ಗ್ರಾ.ಪಂ ವ್ಯಾಪ್ತಿಯ ಸಂಪ್ಲಿಯಿಂದ ಮಾಲಿಂಗನಾಡು ಮೂಲಕ ಹೊಸಳ್ಳಿ ಸಂಪರ್ಕಿಸುವ ರಸ್ತೆಯು ಕೆಸರುಮಯವಾಗಿ ಗ್ರಾಮಸ್ಥರು ತೊಂದರೆ ಅನುಭವಿಸುವಂತಾಗಿದೆ.
ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು ಈ ಮಾರ್ಗವಾಗಿ ಸಂಚರಿಸುವ ಪ್ರಯಾಣಿಕರು ಹರಸಾಹಸ ಪಟ್ಟು ರಸ್ತೆಯಲ್ಲಿ ಸಂಚರಿಸುವಂತಾಗಿದೆ. ವಾಹನಗಳು ಕೂಡ ಸರ್ಕಸ್ ಮಾಡುತ್ತಾ ಸಾಗುವ ಅನಿವಾರ್ಯತೆ ಎದುರಾಗಿದೆ. ಕೆಸರುಮಯ ರಸ್ತೆಯಿಂದ ಬಾಡಿಗೆ ವಾಹನಗಳು ಕೂಡ ಗ್ರಾಮಕ್ಕೆ ಬರಲು ಹಿಂದೇಟು ಹಾಕುತ್ತಿದ್ದು ಗ್ರಾಮಸ್ಥರಿಗೆ ತಲೆನೋವಾಗಿ ಪರಿಣಮಿಸಿದೆ.
ಹಲವು ಬಾರಿ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ರಸ್ತೆ ಸರಿಪಡಿಸುವಂತೆ ಮನವಿ ಮಾಡಿದರೂ ಕೂಡ ಪ್ರಯೋಜನವಾಗಿಲ್ಲ. ಸಂಬಂದಪಟ್ಟ ಅಧಿಕಾರಿಗಳು ಜನಪ್ರತಿನಿಧಿಗಳು ರಸ್ತೆ ದುರಸ್ಥಿ ಮಾಡಬೇಕು ಎಂದು ಮಾಲಿಂಗನಾಡು ಹೊಸಳ್ಳಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.










