ಮೂಡಿಗೆರೆ : ಕೆ.ಪಿ ಪೂರ್ಣಚಂದ್ರ ತೇಜಸ್ವಿ ಅವರ ಜನ್ಮದಿನದ ಪ್ರಯುಕ್ತ ಸೆ. 8ರಂದು ಪುಸ್ತಕ ಬಿಡುಗಡೆ ಕಾರ್ಯಕ್ರಮ…

789
firstsuddi

ಕೊಟ್ಟಿಗೆಹಾರ : ಕೆ.ಪಿ ಪೂರ್ಣಚಂದ್ರ ತೇಜಸ್ವಿ ಅವರ ಜನ್ಮದಿನದ ಪ್ರಯುಕ್ತ ಸೆಪ್ಟೆಂಬರ್ 8 ರಂದು ಕೊಟ್ಟಿಗೆಹಾರ ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಟಾನದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.
ಹಾಸನದ ಅಬಚೂರಿನ ಮಿತ್ರವೃಂದ ಪ್ರಕಾಶನದ ವತಿಯಿಂದ ವಿವಿಧ ಲೇಖಕರ ಆಯ್ದ 13 ಕಥೆಗಳಿರುವ ಬುಕ್ ಪೋಸ್ಟ್ ಎಂಬ ಕಥಾ ಸಂಕಲನ ಬಿಡುಗಡೆಯಾಗಲಿದ್ದು ಕಾರ್ಯಕ್ರಮದಲ್ಲಿ ಲೇಖಕ ಪ್ರದೀಪ್ ಕೆಂಜಿಗೆ, ಮಂಡ್ಯದ ಜಿಲ್ಲಾ ಉದ್ಯೋಗಾಧಿಕಾರಿ ವೇಣುಗೋಪಾಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಡಾ. ರಮೇಶ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.