ಮೂಡಿಗೆರೆ: ಗುಡಿಸಲು ತೆರವಿಗೆ ಬಂದ ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ : ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

461

ಮೂಡಿಗೆರೆ : ಗುಡಿಸಲು ತೆರವುಗೊಳಿಸುವ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಕುಟುಂಬಸ್ಥರು ಹಲ್ಲೆಗೆ ಯತ್ನಿಸಿರುವ ಘಟನೆ ತಾಲ್ಲೂಕಿನ ಕೂವೆ ಗ್ರಾಮದಲ್ಲಿ ನಡೆದಿದೆ. ಕೂವೆ ಗ್ರಾಮದ ಅರಣ್ಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗುಡಿಸಲು ಹಾಕಿಕೊಳ್ಳಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಗುಡಿಸಲು ತೆರವುಗೊಳಿಸಲು ಗ್ರಾಮಕ್ಕೆ ತೆರಳಿದ್ದರು. ಗುಡಿಸಲು ತೆರವುಗೊಳಿಸುತ್ತಿದ್ದ ವೇಳೆ ವಾಸವಿದ್ದ ಕುಟುಂಬಸ್ಥರು ಈ ಜಾಗ ನಮ್ಮದು ಎಂದು ಇಲಾಖೆ ಸಿಬ್ಬಂದಿಗಳೊಂದಿಗೆ ವಾದಕ್ಕೆ ಮುಂದಾಗಿದ್ದಾರೆ. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಕುಟುಂಬಸ್ಥರ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಳಿಕ ಕುಟುಂಬಸ್ಥರು ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಬಡಿಗೆ ಹಾಗೂ ದೊಣ್ಣೆಗಳಿಂದ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗಿದ್ದು, ಹಲ್ಲೆಗೆ ಮುಂದಾಗಿದ್ದ ಕುಟುಂಬಸ್ಥರ ವಿರುದ್ಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.