ಮೂಡಿಗೆರೆ : ಆಗಸ್ಟ್ ತಿಂಗಳಲ್ಲಿ ಸುರಿದ ರಣಭೀಕರ ಮಳೆ ಮಗದೊಡೆ ಮಲೆನಾಡು ಭಾಗಗಳಲ್ಲಿ ಕಾಡಾನೆಗಳ ಹಾವಳಿ ಗಾಯದ ಮೇಲೆ ಉಪ್ಪು ಬಿದ್ದ ಅನುಭವವಾಗಿದೆ. ತಾಲ್ಲೂಕಿನ ಗೌಡಹಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿಯಿಂದ ಮೂರು ಆನೆಗಳು ಬೀಡು ಬಿಟ್ಟಿದ್ದು, ನಾಟಿ ಮಾಡಿದ್ದ ಗದ್ದೆಗಳನ್ನು ಸಂಪೂರ್ಣ ನಾಶ ಮಾಡಿದೆ. ಸ್ಥಳಕ್ಕೆ ಧಾವಿಸದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.










