ಮೂಡಿಗೆರೆ : ಸೆಲ್ಫಿ ತೆಗೆಯಲು ಹೋಗಿ ಯುವಕ ಬಿದ್ದಿರುವ ಘಟನೆ ತಾಲ್ಲೂಕಿನ ಚಾರ್ಮಾಡಿ ಘಾಟ್‍ನಲ್ಲಿ ನಡೆದಿದೆ. ಚಿತ್ರದುರ್ಗ ಮೂಲದ ಯುವಕ ಸೆಲ್ಫಿ ತೆಗೆಯಲು ಹೋಗಿ ಫಾಲ್ಸ್‍ನಿಂದ 100 ಅಡಿ ಎತ್ತರದಿಂದ ಕೆಳಗೆ ಬೀಳುತ್ತಿರುವ ದೃಶ್ಯ ಮೈ ನಡುಗಿಸುವಂತಿದ್ದು, ತಲೆ, ಕೈಕಾಲು ಹಾಗೂ ಸೊಂಟಕ್ಕೆ ಗಂಭೀರವಾಗಿ ಗಾಯಗೊಂಡ ಯುವಕನನ್ನು ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳಕ್ಕೆ ಬಣಕಲ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.









