ಮೂಡಿಗೆರೆ : ಚಾರ್ಮಾಡಿ ಘಾಟ್ ರಸ್ತೆಯ ವಾಹನ ಸಂಚಾರಕ್ಕೆ ಮತ್ತೆ ಬ್ರೇಕ್…

725
firstsuddi

ಮೂಡಿಗೆರೆ : ಭಾರಿ ಮಳೆಯಿಂದಾಗಿ ಚಾರ್ಮಾಡಿ ಘಾಟ್ ರಸ್ತೆ ಗುಡ್ಡ ಹಾಗೂ ಭೂ ಕುಸಿತವಾಗಿದ್ದ ಕಾರಣ ಸೆ.14 ರವರೆಗೂ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ರಾಷ್ಟ್ರೀಯ ಹೆದ್ದಾರಿ ಕಾರ್ಯಪಾಲಕ ಇಂಜಿನಿಯರ್ ವರದಿಯನ್ನು ಆಧರಿಸಿ ದಿನಾಂಕ 29/08/2019 ರಿಂದ ರಸ್ತೆಯ ದುರಸ್ಥಿ ಕಾರ್ಯ ಸ್ವಲ್ಪ ಮಟ್ಟಿಗೆ ಮುಗಿದಿದ್ದ ಕಾರಣ ಲಘು ವಾಹನ ಸಂಚಾರಕ್ಕೆ ಇಂದಿನಿಂದ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6ಗಂಟೆ ವರೆಗೆ ವಾಹನ ಸಂಚಾರಕ್ಕೆ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅನುಮತಿ ನೀಡಿ ಆದೇಶ ಹೊರಡಿಸಿದ್ದರು.

ಆದರೆ ಚಿಕ್ಕಮಗಳೂರು ಪೊಲೀಸ್ ಅಧೀಕ್ಷಕರು ಖುದ್ದು ಸ್ಥಳ ತನಿಖೆ ನಡೆಸಿ ವರದಿ ಸಲ್ಲಿಸಿದ್ದು, ಮಣ್ಣು ಹಸಿಯಾಗಿದ್ದು, ಮತ್ತೆ ಗುಡ್ಡ ಕುಸಿಯುವ ಸಾಧ್ಯತೆ ಇರುವುದರಿಂದ ವಾಹನ ಸಂಚಾರಕ್ಕೆ ಬ್ರೇಕ್ ಹಾಕಿದ್ದು, ಎಲ್ಲಾ ರೀತಿಯ ವಾಹನ ಸಂಚಾರವನ್ನು ಚಾರ್ಮಾಡಿ ಘಾಟ್ ರಸ್ತೆ ಸಹಜ ಸ್ಥಿತಿಗೆ ಬರುವವರೆಗೂ ನಿಷೇಧಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.