ಮೂಡಿಗೆರೆ : ಚಾಲಕನ ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ-ಚಾಲಕ ಅಪಾಯದಿಂದ ಪಾರು

610
firstsuddi

ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿರುವ ಘಟನೆ ಬಾಳೂರು ಪೋಲಿಸ್ ವಸತಿಗೃಹ ಸಮೀಪ ನಡೆದಿದೆ. ಇಂದು ಮಧ್ಯಾಹ್ನ ಬಾಳೂರಿನಿಂದ ಬಣಕಲ್ ಕಡೆಗೆ ನೀರಿನ ಟ್ಯಾಂಕರ್ ಸಾಗಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರಾಗಿದ್ದು, ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಬಳಿಕ ಸ್ಥಳೀಯರ ಸಹಕಾರದಿಂದ ಟ್ರ್ಯಾಕ್ಟರ್ ತೆರವುಗೊಳಿಸಿ ಸಂಚಾರಕ್ಕೆ ಸುಗಮಗೊಳಿಸಲಾಗಿದೆ. ಘಟನೆ ಬಾಳೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.