ಮೂಡಿಗೆರೆ : ಡಿ.ಕೆ. ಶಿವಕುಮಾರ್ ಅವರಿಗೆ ಜಾಮೀನು ಸಿಕ್ಕಿದ ಹಿನ್ನೆಲೆ, ಸಿಹಿ ಹಂಚಿ ಸಂಭ್ರಮಾಚರಣೆ…

610
firstsuddi

ಮೂಡಿಗೆರೆ : ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ದೆಹಲಿಯ ನ್ಯಾಯಾಲಯ ಬುಧವಾರ ಜಾಮೀನು ನೀಡಿದ ಹಿನ್ನೆಲೆಯಲ್ಲಿ ಮೂಡಿಗೆರೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಪಟ್ಟಣದ ಕಾಂಗ್ರೆಸ್ ಕಚೇರಿಯ ಮುಂಭಾಗ ಡಿ.ಕೆ. ಶಿವಕುಮಾರ್ ಅವರ ಪರ ಜೈಕಾರ ಹಾಕಿ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ವೆಂಕಟೇಶ್, ಬಿಳಗುಳ ಸಂಪತ್, ಕಣಚೂರು ದೀಕ್ಷಿತ್, ಆದರ್ಶ್ ರೇವಣ್ಣ ಗೌಡ, ಕಾಂಗ್ರೆಸ್ ಮುಖಂಡರಾದ ಕೇಶವ ಪೂಜಾರಿ, ಹೂವಪ್ಪ, ಬಾವು ಸೇರಿದಂತೆ ಇತರರು ಇದ್ದರು.