ಮೂಡಿಗೆರೆ : ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹೊರಟ್ಟಿ ರಘು, ಉಪಾಧ್ಯಕ್ಷರಾಗಿ ಅತ್ತಿಗೆರೆ ಸಂತೋಷ್ ಆಯ್ಕೆ…

686
firstsuddi

ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ(ರಿ.) ಸಂಘಟನೆಯ ತಾಲ್ಲೂಕು ಶಾಖೆಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಭಾನುವಾರ ಸಂಜೆ ಮೂಡಿಗೆರೆ ಪಟ್ಟಣದಲ್ಲಿ ಹಿರಿಯ ಪತ್ರಕರ್ತ ಸುಂದರ ಬಂಗೇರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಹೊರಟ್ಟಿ ರಘು, ಉಪಾಧ್ಯಕ್ಷರಾಗಿ ಅತ್ತಿಗೆರೆ ಸಂತೋಷ್, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಟಿ.ಸುಧೀರ್ ಮೊದಲಮನೆ, ಕಾರ್ಯದರ್ಶಿಯಾಗಿ ಕಡಿದಾಳ್ ಪುನೀತ್, ಖಜಾಂಜಿಯಾಗಿ ಸುನೀಲ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಚುನಾವಣೆ ನಂತರ ನಡೆದ ಸಭೆಯಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ರಾಜ್ಯ ಕಾರ್ಯದರ್ಶಿ ಕೆಸವಳಲು ರಾಘವೇಂದ್ರ, ಚಿಕ್ಕಮಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಕೆ.ಜಯಕುಮಾರ್, ಉಪಾಧ್ಯಕ್ಷ ಟಿ.ಎಸ್ ಬಸವರಾಜ್, ಜಿಲ್ಲಾ ಕಾರ್ಯದರ್ಶಿ ಸಿ.ವಿ ಬಾಲಕೃಷ್ಣ, ಕಡೂರು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಹೆಚ್.ಮೂರ್ತಿ, ಪ್ರಧಾನ ಕಾರ್ಯದರ್ಶಿ ಟಿ.ಜಿ.ಲೋಕೇಶಪ್ಪ, ಕಾರ್ಯದರ್ಶಿ ಆರ್.ಚೇತನ್, ತರೀಕೆರೆ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಲೋಕೇಶಪ್ಪ, ಅವರುಗಳು ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಅಭಿನಂದಿಸಿದರು. ಚುನಾವಣಾ ಪ್ರಕ್ರಿಯೆಯಲ್ಲಿ ಮೂಡಿಗೆರೆ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕರುಗಳು ಹಾಜರಿದ್ದರು.