ಮೂಡಿಗೆರೆ : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರೈತ ಸಾವು…

1242
firstsuddi

ಮೂಡಿಗೆರೆ : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರೈತ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಕ್ಕಮಕ್ಕಿ ಇಂದಿರಾನಗರದಲ್ಲಿ ನಡೆದಿದೆ. ಮಂಜುನಾಥ್(25) ಮೃತ ರೈತ ಎನ್ನಲಾಗಿದ್ದು, ಮಂಜುನಾಥ್ ಅವರು ಇಂದು ತಮ್ಮ ಜಮೀನಿನಲ್ಲಿ ಕೆಲಸ ಮಾಡಲು ತೆರಳುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೆಸ್ಕಾಂ ಸಿಬ್ಬಂದಿಗಳ ನಿರ್ಲಕ್ಷಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.