ಚಿಕ್ಕಮಗಳೂರು : ಯೋಗ ಶಿಕ್ಷಣ ಮತ್ತು ಸಮಾಜ ಸೇವೆಗಾಗಿ ಮೂಡಿಗೆರೆ ತಾಲ್ಲೂಕು ಬೆಟ್ಟದಮನೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ಫೈರೋಜ್ ಅಹಮದ್ ಅವರಿಗೆ ಇಂಟರ್ ನ್ಯಾಶನಲ್ ಗ್ಲೋಬಲ್ ಪೀಸ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ನೀಡಿದೆ.
ಕಳೆದ 22 ವರ್ಷಗಳಿಂದ ಬೆಟ್ಟದಮನೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಫೈರೋಜ್ ಅಹಮದ್ ಅವರು ಯೋಗ ಶಿಕ್ಷಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ಬೆಂಗಳೂರಿನ ಕಂಟ್ರಿ ಕ್ಲಬ್‍ನಲ್ಲಿ ಇತ್ತೀಚೆಗೆ ನಡೆದ ವಿವಿಯ ಘಟಿಕೋತ್ಸವದಲ್ಲಿ ಫೈರೋಜ್ ಅಹಮದ್ ಅವರಿಗೆ ಪದವಿ ಪ್ರಧಾನ ಮಾಡಲಾಯಿತು.










