ಮೂಡಿಗೆರೆ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಡಿ.25ರಿಂದ ಜ.15ರವೆಗೆ ಬಿಜೆಪಿ ಪಕ್ಷದ ವತಿಯಿಂದ ಜಾಗೃತಿ ಅಭಿಯಾನ ಹಮ್ಮಿಕೊಂಡಿದ್ದು, ಇಂದು ಮೂಡಿಗೆರೆ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮೂಡಿಗೆರೆ ಮಂಡಲ ಹಾಗೂ ಆಲ್ದೂರು ಮಂಡಲ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪೌರತ್ವ ತಿದ್ದುಪಡಿ ಕಾರ್ಯಗಾರಕ್ಕೆ ಚಾಲನೆ ನೀಡಿ ಮಾತನಾಡಿದ ರವೀಂದ್ರ ಬೆಳವಾಡಿ ಅವರು, ಡಿ.11, 2019ರ ದಿನವನ್ನು ನಾವು ಎಲ್ಲರೂ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾಗಿದೆ. ಲೋಕಸಭೆ ಹಾಗೂ ರಾಜ್ಯಸಭೆ ಎರಡರಲ್ಲೂ ಸಹ ಈ ಕಾಯ್ದೆ ಜಾರಿಯಾಗಿದ್ದು, ಇದು ದೇಶದ ನಾಗರೀಕರಿಗೆ ಅನುಕೂಲವಾಗುತ್ತದೆ. ಜನರ ಅನುಕೂಲಕ್ಕೆ ಈ ಕಾನೂನು ಕೇಂದ್ರ ಸರ್ಕಾರ ಜಾರಿಗೆ ತಂದಿರುವುದು. ಆದರೆ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಕೆಲವು ಪಟಭದ್ರ ಹಿತಾಸಕ್ತಿಗಳು ನಾಗರೀಕರಲ್ಲಿ ಗೊಂದಲ ಉಂಟುಮಾಡುತ್ತಿವೆ. ಈ ಕಾಯ್ದೆ ಜಾರಿಯಿಂದ ನಮ್ಮಲ್ಲಿರುವ ಅಲ್ಪಸಂಖ್ಯಾತರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗುವುದಿಲ್ಲ. ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶದಲ್ಲಿ ನೆಲೆಸಿರುವ ಧಾರ್ಮಿಕ ಅಲ್ಪಸಂಖ್ಯಾತರ ರಕ್ಷಣೆಗೆ ಈ ಪೌರತ್ವ ತಿದ್ದುಪಡಿ ಕಾಯ್ದೆ ಪೂರಕವೇ ಹೊರತು ನಮ್ಮ ದೇಶದಲ್ಲಿ ಇರುವ ಮುಸ್ಲಿಂ ಬಾಂಧವರಿಗಲ್ಲ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಕಾಯ್ದೆ ಎಲ್ಲಾ ಧರ್ಮದವರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವಂತಹ ಪ್ರಯತ್ನ ಇದು ಎಂದರು. ಕಾರ್ಯಕ್ರಮದಲ್ಲಿ ಮೂಡಿಗೆರೆ ಬಿಜೆಪಿ ಮಂಡಲ ಅಧ್ಯಕ್ಷ ಜನ್ನಾಪುರ ರಘು, ಆಲ್ದೂರು ಮಂಡಲ ಅಧ್ಯಕ್ಷ ದಿನೇಶ್, ಹಳೇ ಮೂಡಿಗೆರೆ ಜಗದೀಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ರತನ್ ಕುಮಾರ್ ಸೇರಿದಂತೆ ಕಾರ್ಯಕರ್ತರು ಭಾಗಿಯಾದರು.
Home ಸ್ಥಳಿಯ ಸುದ್ದಿ ಮೂಡಿಗೆರೆ : ಪೌರತ್ವ ತಿದ್ದುಪಡಿ ಕಾಯ್ದೆಯಿಂದ ದೇಶದ ಜನತೆಗೆ ಅನುಕೂಲವಾಗುತ್ತದೆ : ರವೀಂದ್ರ ಬೆಳವಾಡಿ.










