ಮೂಡಿಗೆರೆ : ತಾಲ್ಲೂಕಿನ ಬಿಳಗುಳ ಗ್ರಾಮದಲ್ಲಿ ಚಿರತೆ ಮತ್ತೆ ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಡಿಎಫ್‍ಓ ಕುಮಾರ್ ಅವರ ಮನೆ ಮುಂದೆಯ ವಿಜಯ ಬ್ಯಾಂಕ್‍ನ ಹಿಂಭಾಗದಲ್ಲಿ ಚಿರತೆ ಓಡಾಡಿದ್ದು, ಮೂಡಿಗೆರೆ ಪಟ್ಟಣ ಹಾಗೂ ಬಿಳಗುಳ ಸುತ್ತಮುತ್ತಲಿನ ಜನರಲ್ಲಿ ಆತಂಕ ಹೆಚ್ಚಾಗಿದೆ. ಬೆಳಗಿನ ಜಾವ ಚಿರತೆ ಓಡಾಡಿರುವ ಹೆಜ್ಜೆ ಗುರುತು ಪತ್ತೆಯಾಗಿದ್ದು, ಪದೇ ಪದೇ ಚಿರತೆ ಪ್ರತ್ಯಕ್ಷವಾಗುತ್ತಿರುವುದರಿಂದ ಸ್ಥಳೀಯರು ಭಯಗೊಂಡಿದ್ದು, ಕೂಡಲೇ ಚಿರತೆಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.









