ಮೂಡಿಗೆರೆ : ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಸೆರೆ ಹಿಡಿದು ಕಾಡಿಗೆ ಬಿಟ್ಟಿರುವ ಘಟನೆ ತಾಲ್ಲೂಕಿನ ಸುಂಕಸಾಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನರೇಂದ್ರ ಎಂಬುವವರ ತೋಟದ ಮನೆಯಲ್ಲಿ ಅವಿತುಕೊಂಡಿದ್ದ 10 ಅಡಿ ಉದ್ದದ ಕಾಳಿಂಗ ಸರ್ಪವನ್ನು ಕಂಡು ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದರು. ಬಳಿಕ ಕೂಡಲೇ ಗ್ರಾಮಸ್ಥರು ಸ್ನೇಕ್ ಆರಿಫ್ ಅವರಿಗೆ ಮಾಹಿತಿಯನ್ನು ತಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸ್ನೇಕ್ ಆರಿಫ್ ಅವರು ಕಾಳಿಂಗ ಸರ್ಪವನ್ನು ಸೆರೆಹಿಡಿದು ಚಾರ್ಮಾಡಿ ಘಾಟ್ನ ಅರಣ್ಯಕ್ಕೆ ಬಿಟ್ಟಿದ್ದಾರೆ.










