ಮೂಡಿಗೆರೆ : ಭಾರಿ ಮಳೆಗೆ ಚಾರ್ಮಾಡಿ ಘಾಟ್‍ನಲ್ಲಿ ಮತ್ತೊಂದು ಗುಡ್ಡ ಕುಸಿತ…

358
firstsuddi

ಮೂಡಿಗೆರೆ : ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲ್ಲೂಕಿನ ಚಾರ್ಮಾಡಿ ಘಾಟ್‍ನಲ್ಲಿ ಮತ್ತೆ ಗುಡ್ಡ ಕುಸಿತವಾಗಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಚಾರ್ಮಾಡಿ ಘಾಟ್‍ನ ಆಲೇಖಾನ್ ಬಳಿ ಗುಡ್ಡ ಕುಸಿದು ಭಾರಿ ಪ್ರಮಾಣದ ಮಣ್ಣು ಹಾಗೂ ಬಂಡೆಗಳು ರಸ್ತೆಗೆ ಬಿದ್ದಿದ್ದು, ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ಆರಂಭಿಸಲಾಗಿದೆ.