ಮೂಡಿಗೆರೆ: ರಾಜ್ಯ ಮಟ್ಟಕ್ಕೆ ಆಯ್ಕೆ -ಅಂಗಡಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳ ಸಾಧನೆ…

404
firstsuddi

ಮೂಡಿಗೆರೆ :ನವೆಂಬರ್ 16ರಂದು ನರಸಿಂಹರಾಜಪುರ ಡಿ.ಸಿ.ಎಂ.ಸಿ ಸಂಯುಕ್ತ ಪ್ರೌಢಶಾಲೆಯಲ್ಲಿ ನಡೆದ ಚಿಕ್ಕಮಗಳೂರು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ವ ಸ್ಪರ್ಧೆಗಳಲ್ಲಿ ಮೂಡಿಗೆರೆಯ ಅಂಗಡಿ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳು ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ವಿದ್ಯಾರ್ಥಿಗಳಾದ ಯು.ಕೆ.ಸುಶ್ಮಿತಾ ಅವರು ಕನ್ನಡ ಭಾಷಣದಲ್ಲಿ, ಎ.ಜಿ.ಆತ್ಮಿಯಾ ಇಂಗ್ಲೀಷ್ ಭಾಷಣದಲ್ಲಿ ಪ್ರಥಮ ಸ್ಥಾನಗಳನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಸಾಧನೆ ಮೆರೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಜಯಶೀಲರಾಗುವಂತೆ ಹಾರೈಸಿದ್ದಾರೆ.