ಮೂಡಿಗೆರೆ: ವಿಧಾನಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್ ದಂಪತಿ ಕೊರೊನಾ ಸೋಂಕಿನಿಂದ ಗುಣಮುಖ : ಆಸ್ಪತ್ರೆಯಿಂದ ಡಿಸ್ಚಾರ್ಜ್…

143
firstsuddi

ಮೂಡಿಗೆರೆ: ಜುಲೈ 4ರಂದು ಕೋವಿಡ್-19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಧಾನಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್ ದಂಪತಿಗಳು ಗುಣಮುಖರಾಗಿದ್ದು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಹೀಗೆಂದು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ನಿಮ್ಮೆಲ್ಲರ ಪ್ರೀತಿ, ಹಾರೈಕೆ, ಆಶೀರ್ವಾದಿಂದ ಇಂದು ನಾನು ಹಾಗೂ ನನ್ನ ಶ್ರೀಮತಿ ಕೋವಿಡ್-19 ವೈರಸ್‍ನಿಂದ ಗುಣಮುಖರಾಗಿ ಮನೆಗೆ ಮರಳಿದ್ದೇವೆ. ವೈದ್ಯರ ಸಲಹೆಯಂತೆ ಮುಂದಿನ 14 ದಿನಗಳ ಕಾಲ ವಿಶ್ರಾಂತಿ ಪಡೆಯಬೇಕಿದ್ದು, ಎಲ್ಲವೂ ತಹಬದಿಗೆ ಬಂದ ಮೇಲೆ ಎಲ್ಲರನ್ನು ಭೇಟಿ ಮಾಡುತ್ತೇನೆ.
ಕೊರೊನಾ ವೈರಸ್ ಸೋಂಕಿನಿಂದ ನಾವುಗಳು ಗುಣಮುಖರಾಗಲು ನೀವುಗಳು ತೋರಿದ ಪ್ರೀತಿ ವಿಶ್ವಾಸಕ್ಕೆ ನನ್ನಿಂದ ಪದಗಳ ರೂಪದಲ್ಲಿ ಕೃತಜ್ಞತೆ ಹೇಳಲು ಸಾಧ್ಯವಿಲ್ಲ. ನಿಮ್ಮ ಪ್ರೀತಿ ಹಾರೈಕೆಗೆ ಉತ್ತಮ ಸೇವೆ ಮಾಡುವುದರ ಮೂಲಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ದೇವರ ಆಶೀರ್ವಾದ ನಿಮಗೆ ನಿಮ್ಮ ಕುಟುಂಬಸ್ಥರಿಗೆ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.