ಮೂಡಿಗೆರೆ: ವೃದ್ಧನ ಮೇಲೆ‌ ಕಾಡಾನೆ ದಾಳಿ.

61
ಮೂಡಿಗೆರೆ : ಸಮೀಪದ ಮುತ್ತಿಗೆಪುರ ಗ್ರಾಮದಲ್ಲಿ
 ಮಂಗಳವಾರ ರಾತ್ರಿ ನಡೆದ ಕಾಡಾನೆ ದಾಳಿಯಲ್ಲಿ ಸ್ಥಳೀಯ ವ್ಯಕ್ತಿ ಒಬ್ಬರಿಗೆ ಗಂಭೀರ ಗಾಯಗೊಂಡಿದ್ದು.
63 ವರ್ಷದ ಫಿಲಿಪ್ ಮಧ್ಯ ರಾತ್ರಿ ಮನೆಯ ಸಮೀಪ ನಾಯಿ ಬೊಗಳಿದಾಗ ಜಾನುವಾರುಗಳು ಬಂದಿರಬಹುದು ಎಂದು ಮನೆಯ ಹೊರಗೆ ಬಂದಿದ್ದಾರೆ.  ಮನೆಯಿಂದ ಹೊರಬಂದ ವೇಳೆ  ಮನೆಯ ಸಮೀಪವೆ ಬಂದಿದ್ದ ಕಾಡಾನೆ ಏಕಾಏಕಿ ಫಿಲಿಪ್ ಅವರ ಮೇಲೆ ದಾಳಿ ನಡೆಸಿದೆ. ಕಾಡಾನೆ ಸೊಂಡಿಲಿನಿಂದ ಫಿಲಿಪ್ ಅವರನ್ನು ತೆಗೆದು ಎಸೆದಿದೆ. ಆನೆ ದಾಳಿಯಿಂದ ಕಾಲು, ಎದೆ ಹಾಗೂ ಕೈಭಾಗಕ್ಕೆ ತೀವ್ರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಫಿಲಿಪ್ ಕ್ಯಾಸ್ಟೋಲಿನಾ ಅವರು ಮುತ್ತಿಗೆಪುರ ನಿವಾಸಿಯಾಗಿದ್ದು,  
ಗ್ರಾಮದ ಕಾಫಿ ತೋಟಗಳಲ್ಲಿ ಕಳೆದ ಕೆಲವು ವಾರಗಳಿಂದ ಸುಮಾರು 35 ಕಾಡಾನೆಗಳು ವಾಸ್ತವ್ಯ ಹೂಡಿದ್ದು, ಅವು ನಿರಂತರವಾಗಿ ವಸತಿ ಪ್ರದೇಶಗಳಿಗೆ ನುಗ್ಗುತ್ತಿರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ತಾಲ್ಲೂಕಿನ ಮಾಕೋನಹಳ್ಳಿ, ಕಾರಬೈಲ್, ದುಂಡುಗ, ಹಳಸೆ, ಮುತ್ತಿಗೆಪುರ ಗ್ರಾಮಗಳ ಸುತ್ತಾ ಸಂಚರಿಸುತ್ತಾ ತೀವ್ರ ಉಪಟಳ ನೀಡುತ್ತಿವೆ. ಜನರ ನೋವುಗಳನ್ನು ಕೇಳುವವರು ಇಲ್ಲದಾಗಿದೆ ಸ್ಥಳೀಯರು  ದೂರಿದ್ದಾರೆ.
ಇನ್ನೂ ಮೂಡಿಗೆರೆ ಅರಣ್ಯ ಅಧಿಕಾರಿ ಕಾವ್ಯ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ