ಮೂಡಿಗೆರೆ : ಸರ್ಕಾರ ಎಪಿಎಂಸಿ ಕಾಯಿದೆಗೆ ತಂದಿರುವ ತಿದ್ದುಪಡಿಯನ್ನು ಕೂಡಲೇ ವಾಪಸ್ಸು ಪಡೆಯಬೇಕು: ಡಿ.ಕೆ ತಾರಾದೇವಿ.

231
firstsuddi

ಮೂಡಿಗೆರೆ : ಕರ್ನಾಟಕ ಸರ್ಕಾರ ಎಪಿಎಂಸಿ ಕಾಯಿದೆಗೆ ತಂದಿರುವ ತಿದ್ದುಪಡಿಯನ್ನು ಕೂಡಲೇ ವಾಪಸ್ಸು ಪಡೆಯಬೇಕು ಎಂದು ಕೇಂದ್ರ ಮಾಜಿ ಸಚಿವೆ ಡಿಕೆ ತಾರಾದೇವಿ ಆಗ್ರಹಿಸಿದ್ದಾರೆ.
ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರುವ ಮೊದಲು ರೈತರುಗಳ ಉತ್ಪನ್ನಗಳ ಬೆಲೆಗಳ ಮೇಲೆ ಆಗುವ ದುಷ್ಪರಿಣಾಮಗಳನ್ನು ಪಟ್ಟಿಮಾಡಿ ಸಾಧಕ ಬಾಧಕಗಳನ್ನು ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕಿತ್ತು. ರೈತ ಪ್ರತಿನಿಧಿಗಳು, ರೈತ ಸಂಘಟನೆಗಳು, ಕೃಷಿ ಉತ್ಪನ್ನ ವ್ಯಾಪಾರಸ್ಥರ ಸಂಘಟನೆ, ಸಹಕಾರ ಕ್ಷೇತ್ರದ ಧುರೀಣರು, ಎಪಿಎಂಸಿ ಅಧಿಕಾರಿಗಳು ಹಾಗೂ ಪ್ರತಿನಿಧಿಗಳು ಮತ್ತು ಎಲ್ಲಾ ರಾಜಕೀಯ ಪಕ್ಷಗಳ ಪ್ರಮುಖ ಮುಖಂಡರುಗಳನ್ನು ಕರೆದು ಚರ್ಚಿಸಬೇಕಿತ್ತು ಎಂದು ಹೇಳಿದ್ದಾರೆ.
ಕರ್ನಾಟಕ ಸರ್ಕಾರ ಆತುರಾತುರವಾಗಿ ಎಪಿಎಂಸಿ ಕಾಯಿದೆಗೆ ಸುಗ್ರೀವಾಜ್ಞೆಯ ಮೂಲಕ ತಿದ್ದುಪಡಿ ತರುವ ಕ್ರಮ ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಿರುವುದು ಸುಳ್ಳಲ್ಲ ಈ ತಿದ್ದುಪಡಿ ಕಾರ್ಪೊರೇಟ್ ಹಾಗೂ ಬಹುರಾಷ್ಟ್ರೀಯ ಕಂಪೆನಿಗಳು ಕೃಷಿ ಉತ್ಪನ್ನ ಮಾರಾಟ ಕ್ಷೇತ್ರಕ್ಕೆ ಕಾಲಿರಿಸಲು ಅನುವು ಮಾಡಿಕೊಡುವ ಒಂದೇ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಳ್ಳಲು ಮುಂದಾಗಿದೆ ಎಂಬ ಗಂಭೀರ ಆರೋಪ ಸರ್ಕಾರದ ಮೇಲಿದೆ ಎಂದಿದ್ದಾರೆ.