ಮೂಡಿಗೆರೆ : ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ನವಜಾತ ಶಿಶುವನ್ನು ಜೀರೋ ಟ್ರಾಪಿಕ್ ಮೂಲಕ ಅಂಬುಲೆನ್ಸ್ ನಲ್ಲಿ ಶಿವಮೊಗ್ಗದಿಂದ ಮಂಗಳೂರಿಗೆ ಕರೆದೊಯ್ಯಲಾಯಿತು.
ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿದ್ದ ಆಂಬುಲೆನ್ಸ್ಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿಕೊಟ್ಟಿರೋ ಪೊಲೀಸರಿಗೆ ಚಿಕ್ಕಮಗಳೂರು ಜಿಲ್ಲೆಯ ಜನ ಶ್ಲಾಘಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪ ಮೂಲದ ಎರಡು ತಿಂಗಳ ಮಗುವಿಗೆ ತುರ್ತಾಗಿ ಹೃದಯ ಸಂಬಂಧಿ ಚಿಕಿತ್ಸೆ ನೀಡಬೇಕಿತ್ತು. ಆದರೆ, ಬಡಕುಟುಂಬದ ಮಗುವಿನ ಪೋಷಕರು ಆಸ್ಪತ್ರೆಯಲ್ಲಿನ ಆಂಬುಲೆನ್ಸ್ ಹಣ ಹೆಚ್ಚಾಗಿದ್ದರಿಂದ ಟ್ರಸ್ಟ್ ಮೂಲಕ ಚಿಕ್ಕಮಗಳೂರಿನ ಆಂಬುಲೆನ್ಸ್ಗೆ ಸಂಪರ್ಕಿಸಿದ್ದರು. ಕೂಡಲೇ ಶಿವಮೊಗ್ಗಕ್ಕೆ ಹೋಗಿ ಮಗುವನ್ನು ಕರೆದುಕೊಂಡು ಹೊರಟ ಆಂಬುಲೆನ್ಸ್ ಚಾಲಕ ಆಗುಂಬೆ ಘಾಟ್ ಮೇಲೆ ಹೋಗಲು ರಸ್ತೆ ಜಾಮ್ ಆಗಿದ್ದ ಕಾರಣ ಚಿಕ್ಕಮಗಳೂರು ಮೂಲಕ ಮಂಗಳೂರಿಗೆ ಹೊರಟಿದ್ದಾರೆ. ಈ ವೇಳೆ, ಆಂಬುಲೆನ್ಸ್ ಚಾಲಕ ಚಿಕ್ಕಮಗಳೂರು ಪೊಲೀಸರಿಗೆ ಮನವಿ ಮಾಡಿದ್ದರಿಂದ ಕಾಫಿನಾಡ ಖಾಕಿಗಳು ಚಿಕ್ಕಮಗಳೂರಿನಿಂದ ಕೊಟ್ಟಿಗೆಹಾರದ ಗಡಿ ದಾಟುವವರೆಗೂ ಆಂಬುಲೆನ್ಸ್ಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದಾರೆ. ರಸ್ತೆಯುದ್ಧಕ್ಕೂ ಜನರೂ ಕೂಡ ಆಂಬುಲೆನ್ಸ್ ದಾರಿ ಮಾಡಿಕೊಟ್ಟಿದ್ದಾರೆ. ಪೊಲೀಸರ ಈ ನಡೆಗೆ ಜಿಲ್ಲೆಯ ಜನ ಕೂಡ ಶ್ಲಾಘಿಸಿದ್ದಾರೆ. ಶಿವಮೊಗ್ಗದಿಂದ ಸುಮಾರು ಎಂಟರಿಂದ ಒಂಬತ್ತು ಗಂಟೆಯ ಜರ್ನಿಯ ಮಂಗಳೂರಿಗೆ ಆಂಬೆಲೆನ್ಸ್ ಚಾಲಕ ಮೂರೇ ಗಂಟೆಯಲ್ಲಿ ತಲುಪಿದ್ದು ಸಾರ್ವಜನಿಕರಿಂದ ಆಂಬುಲೆನ್ಸ್ ಚಾಲಕನ ಚಾಕಚಕ್ಯತೆಯ ಡ್ರೈವಿಂಗಿಗೂ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Home ಸ್ಥಳಿಯ ಸುದ್ದಿ ಮೂಡಿಗೆರೆ : ಹೃದ್ರೋಗದಿಂದ ಬಳಲುತ್ತಿದ್ದ ನವಜಾತ ಶಿಶುವನ್ನು ಜೀರೋ ಟ್ರಾಪಿಕ್ನಲ್ಲಿ ಮಂಗಳೂರಿಗೆ ರವಾನೆ…










