ಮೂಡಿಗೆರೆ : ಹೆಬ್ಬಾಳೆ ಸೇತುವೆ ಮುಳುಗಡೆಗೆ ಒಂದೇ ಒಂದು ಅಡಿಯಷ್ಟು ಬಾಕಿ…

837

ಮೂಡಿಗೆರೆ : ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕುದುರೆಮುಖ, ಕಳಸ, ಸಂಸೆ, ಬಾಳೆಹೊಳೆ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಜನಜೀವನ ಅಸ್ಥವ್ಯಸ್ಥವಾಗಿದ್ದು, ಮಲೆನಾಡಿನ ಜನರು ಮತ್ತೆ ಆತಂಕಕ್ಕೀಡಾಗಿದ್ದಾರೆ. ಭಾರಿ ಮಳೆಯಿಂದಾಗಿ ತುಂಗಾ ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿದ್ದು, ಕಳಸ ಹೊರನಾಡಿನ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮುಳುಗಡೆಗೆ ಒಂದೇ ಒಂದು ಅಡಿ ಬಾಕಿ ಇದ್ದು, ಹೆಬ್ಬಾಳೆ ಸೇತುವೆ ಮುಳುಗಡೆಯಾದರೆ ಹೊರನಾಡು ಸಂಪರ್ಕ ಸಂಪೂರ್ಣ ಕಡಿತವಾಗುವ ಸಾಧ್ಯತೆ ಇದೆ.