ಮೂಡಿಗೆರೆ : ತಾಲ್ಲೂಕಿನ ಹಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು, ಇಂದು ಸುರಿದ ಭಾರಿ ಮಳೆಗೆ ಸೇತುವೆ ಮೋರಿ ಸಮೇತ ಕೊಚ್ಚಿ ಹೋಗಿರುವ ಘಟನೆ ಹೊರನಾಡು ಸಮೀಪದ ಹೊಕ್ಕಳ್ಳಿ ಕೊಪ್ಪದಲ್ಲಿ ನಡೆದಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ 2ತಿಂಗಳ ಹಿಂದೆ ನಿರ್ಮಾಣವಾಗಿತ್ತು. ಆದರೆ ಇಂದು ಸುರಿದ ಭಾರಿ ಮಳೆಗೆ ಸ್ಥಳೀಯರ ಕಣ್ಣೆದುರೇ ನೀರಿನ ರಭಸಕ್ಕೆ 2 ಕಿ.ಮೀ ದೂರಕ್ಕೆ ಕೊಚ್ಚಿ ಹೋಗಿದ್ದು, ಸೇತುವೆ ಮೇಲೆ ಚಲಿಸುತ್ತಿದ್ದ ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಕಳೆದ ಎರಡು ದಿನಗಳಿಂದ ಮಲೆನಾಡಿನಲ್ಲಿ ಬಿಟ್ಟು ಬಿಟ್ಟು ಗುಡುಗು ಸಹಿತ ಮಳೆಯಾಗುತ್ತಿದೆ.









