ಮೂಡಿಗೆರೆ : 17 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಯುವಕನೋರ್ವ ಅತ್ಯಾಚಾರವೆಸಗಿರುವ ಪ್ರಕರಣವೊಂದು ತಾಲ್ಲೂಕಿನ ನಿಡುವಾಳೆ ಗ್ರಾಮದಲ್ಲಿ ನಡೆದಿದೆ.
ಕಾಫಿ ತೋಟದಲ್ಲಿ ಬಾಲಕಿ ಮೇಲೆ ಯುವಕ ಅತ್ಯಾಚಾರ ಎಸಗಿದ್ದಾನೆ. ಈ ಬಗ್ಗೆ ಬಾಲಕಿಯ ಪೋಷಕರು ಬಾಳೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಬಾಳೂರು ಪೊಲೀಸರು ಪೋಕ್ಸೊ ಕಾಯ್ದೆಯಡಿ ಕೇಸ್ ದಾಖಲಿಸಿ ಆರೋಪಿ ನಿರಂಜನ್ (24) ಎಂಬಾತನನ್ನು ಬಂಧಿಸಿದ್ದಾರೆ.










