ಮೂರು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ – ಐವರು ಸಾವು…

47
firstsuddi

ಲಕ್ನೋ : ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಐವರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ನಲ್ಲಿ ನಡೆದಿದೆ.

3 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಐವರು ಪ್ರಾಣ ಕಳೆದುಕೊಂಡಿದ್ದು, ಏಳು ಮಂದಿಯನ್ನು ರಕ್ಷಿಸಲಾಗಿದೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಮೊರಾದಾಬಾದ್ ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಶೈಲೇಂದ್ರ ಕುಮಾರ್ ಸಿಂಗ್ ಹೇಳಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಈ ಕಟ್ಟಡದಲ್ಲಿ ಒಂದೇ ಕುಟುಂಬದವರು ವಾಸವಿದ್ದವರು ಎಂದು ತಿಳಿದುಬಂದಿದೆ. ಮಾಹಿತಿ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದು, ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದನ್ನು ತನಿಖೆ ನಡೆಸುತ್ತಿದ್ದಾರೆ.