ಚಾಮರಾಜನಗರ : ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮೂರು ದಿನಗಳ ಕಾಲ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಶ್ರಾವಣದಲ್ಲಿ ಹೆಚ್ಚು ಭಕ್ತರು ಬರುವ ಹಿನ್ನಲೆ ಸೆಪ್ಟೆಂಬರ್ 5, 6 ಹಾಗೂ 7 ರಂದು ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮೂರು ದಿನಗಳ ಕಾಲ ಎಣ್ಣೆಮಜ್ಜನ, ಅಮವಾಸ್ಯೆ ಪೂಜೆ ಹಾಗೂ 108 ಕುಂಭಾಭಿಷೇಕ ನಡೆಯಲಿದ್ದು, ಈ ಸಂದರ್ಭದಲ್ಲಿ ಹೆಚ್ಚಿನ ಭಕ್ತರು ಆಗಮಿಸುವ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ.
ಈಗಾಗಲೇ ಕಳೆದ ನಾಲ್ಕು ವಾರಗಳಿಂದ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ದರ್ಶನಕ್ಕೂ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಇದೀಗ ಮೂರು ದಿನಗಳ ಕಾಲ ಮಹದೇಶ್ವರನ ದರ್ಶನಕ್ಕೂ ನಿರ್ಬಂಧ ವಿಧಿಸಲಾಗಿದೆ.










