ಮೂರು ಪ್ರತ್ಯೇಕ ಎನ್‍ಕೌಂಟರ್ – ನಾಲ್ವರು ಉಗ್ರರು ಹತ…

58
firstsuddi

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮೂರು ಪ್ರತ್ಯೇಕ ಎನ್​ಕೌಂಟರ್ ಗಳಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ಕಳೆದ ರಾತ್ರಿಯಿಂದಲೇ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ, ಗಂದೇರ್ ಬಾಲ್ ಮತ್ತು ಹಂದ್ವಾರಾದಲ್ಲಿ ಎನ್​ಕೌಂಟರ್ ನಡೆಸಲಾಗಿದ್ದು, ರಾತ್ರಿ ನಡೆದ ಎನ್​ಕೌಂಟರ್ ನಲ್ಲಿ ಇಬ್ಬರು ಹಾಗೂ ಇಂದು ಬೆಳಿಗ್ಗೆ ನಡೆಸಲಾದ ಎನ್​ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. 

ಕಾಶ್ಮೀರದಲ್ಲಿ ನಡೆದ ಎನ್​ಕೌಂಟರ್ ನಲ್ಲಿ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದ್ದು,  ಇಬ್ಬರು ಜೈಷ್ ಎ ಮೊಹಮದ್ ಮತ್ತು ಮತ್ತಿಬ್ಬರು ಉಗ್ರರು ಲಷ್ಕರ್ ಎ ತೋಯ್ಬಾ ಸಂಘಟನೆಗೆ ಸೇರಿದವರು. ಭದ್ರತಾ ಪಡೆಗಳು ಕಾಶ್ಮೀರದಲ್ಲಿ ಹಲವು ಕಾರ್ಯಾಚರಣೆಗಳನ್ನು ಆರಂಭಿಸಿವೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಅವರು ಮಾಹಿತಿ ನೀಡಿದರು.

ಈ ಕುರಿತು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದು, ಹಂದ್ವಾರದ ರಾಜ್ವಾರ್ ಪ್ರದೇಶದ ನೆಚಮಾದಲ್ಲಿ ಎನ್‍ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯದಲ್ಲಿವೆ. ಎನ್‍ಕೌಂಟರ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಿದ್ದಾರೆ.