ಮೂರು ವರ್ಷದ ಹಿಂದೆ ವಿವಾಹವಾಗಿದ್ದ ನವ ದಂಪತಿ ಆತ್ಮಹತ್ಯೆ…

71
firstsuddi

ತುಮಕೂರು: ಮೂರು ವರ್ಷದ ಹಿಂದೆ ವಿವಾಹವಾಗಿದ್ದ ನವ ದಂಪತಿ ತಾವು ವಾಸವಿದ್ದ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ರೊಪ್ಪ ಗ್ರಾಮದಲ್ಲಿ ನಡೆದಿದೆ.

ಮನು(26) ಹಾಗೂ ಪತ್ನಿ ಪವಿತ್ರಾ(24) ಮೃತ ದಂಪತಿ. ಈ ದಂಪತಿ ಮೂರು ವರ್ಷದ ಹಿಂದೆ ವಿವಾಹವಾಗಿದ್ದರು. ಎಂದಿನಂತೆ ಮನೆಯಿಂದ ಹೊರಬಾರದೇ ಇದ್ದಾಗ ಸ್ಥಳೀಯರು ಅನುಮಾನಿಸಿ ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಆತ್ಮಹತ್ಯೆಗೆ ಕುಟುಂಬದ ಆರ್ಥಿಕ ಸಂಕಷ್ಟ ಕಾರಣ ಎಂಬ ವಿಚಾರ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.