ಮಂಡ್ಯ : ಮೂವರು ಅರ್ಚಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳನ್ನು ವಿಜಿ (25), ಗಾಂಧಿ (28) ಮತ್ತು ಮಂಜು (30) ಎಂದು ಗುರುತಿಸಲಾಗಿದೆ. ಆರೋಪಿಗಳು ಜಿಲ್ಲೆಯ ಮದ್ದೂರು-ಮಳವಳ್ಳಿ ಸಾದೊಳಲು ಗೇಟ್ ಬಳಿ ಇರುವ ಬಗ್ಗೆ ಖಚಿತ ಮಾಹಿತಿಯನ್ನು ತಿಳಿದ ಪೊಲೀಸರು ಆರೋಪಿಗಳನ್ನು ಬಂಧಿಸಲು ತೆರಳಿದ್ದಾರೆ. ಆದರೆ ಆರೋಪಿಗಳು ಪೊಲೀಸರ ಮೇಲೆ ಕಲ್ಲು ಹಾಗೂ ಚಾಕಿನಿಂದ ಹಲ್ಲೆ ನಡೆಸಿದ್ದಾರೆ. ಈ ವೇಲೆ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯಲ್ಲಿ ಇಬ್ಬರು ಪಿ.ಎಸ್.ಐ ಸೇರಿದಂತೆ ಇಬ್ಬರು ಪೇದೆಗಳಿಗೆ ಗಾಯಗಳಾಗಿದ್ದು, ಅವರನ್ನು ಮದ್ದೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.










