ಚಿತ್ರದುರ್ಗ: ಮೃತ ಹಸುವಿನ ಮರಣೋತ್ತರ ಪರೀಕ್ಷೆಗೆ ಲಂಚವನ್ನು ಕೇಳಿದ ಪಶು ವೈದ್ಯಾಧಿಕಾರಿ ಲೋಕಾಯುಕ್ತರ ಬಲೆಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದಲ್ಲಿ ನಡೆದಿದೆ
ಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು, ಚಿಕ್ಕಜಾಜೂರು ಗ್ರಾಮದಲ್ಲಿ ಮೃತ ಹಸುವಿನ ಪೋಸ್ಟ್ ಮಾರ್ಟ್ಂ ರಿಪೋರ್ಟ್ ನೀಡಲು ಕಾಗಳಗೆರೆ ಗ್ರಾಮದ ರೈತ ಎಸ್. ಸ್ವಾಮಿಯಿಂದ ಪಶು ವೈದ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಲಂಚವನ್ನು ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.










