ಮೆಗಾಸ್ಟಾರ್ ಚಿರಂಜೀವಿಗೆ ವರ್ಷದ ಚಲನಚಿತ್ರ ವ್ಯಕ್ತಿತ್ವ ಪ್ರಶಸ್ತಿ – ಮೋದಿ ಮೆಚ್ಚುಗೆ…

72
firstsuddi

ತೆಲುಗು ನಟ, ಮೆಗಾಸ್ಟಾರ್ ಚಿರಂಜೀವಿ ಅವರು 2022 ರ ಐಎಫ್‌ಎಫ್‌ಐ ಇಂಡಿಯನ್ ಫಿಲ್ಮ್ ಪರ್ಸನಾಲಿಟಿ ಆಫ್ ದಿ ಇಯರ್ ಪ್ರಶಸ್ತಿಗೆ ಭಾಜರಾಗಿದ್ದಾರೆ.

ಗೋವಾದಲ್ಲಿ ಇಂದು ನಡೆದ ಐಎಫ್ಎಫ್ಐನ 53ನೇ ಆವೃತ್ತಿಯ ಅದ್ಧೂರಿ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಈ ಪ್ರಶಸ್ತಿ ಘೋಷಣೆ ಮಾಡಿದ್ದಾರೆ.

ಜಿರಂಜೀವಿ ಅವರದ್ದು ಗಮನಾರ್ಹ ವ್ಯಕ್ತಿತ್ವ. ಅಗಾಧವಾದ ಕೆಲಸ, ವಿಭಿನ್ನವಾದ ಪಾತ್ರಗಳು ಹಾಗೂ ಅದ್ಭುತ ವ್ಯಕ್ತಿತ್ವದ ಕಾರಣದಿಂದಾಗಿ ಹಲವು ಪೀಳಿಗೆಯ ಅಭಿಮಾನಿಗಳು ಅವರನ್ನು ಪ್ರೀತಿಸುತ್ತಾರೆ. 2022ನೇ ಸಾಲಿನ ಭಾರತೀಯ ಸಿನಿಮಾ ವ್ಯಕ್ತಿತ್ವ ಪ್ರಶಸ್ತಿಗೆ ಭಾಜನವಾಗಿರುವ ಚಿರಂಜೀವಿ ಅವರಿಗೆ ಅಭಿನಂದನೆಗಳು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಾಲ್ಕು ದಶಕಗಳಿಂದಲೂ ಭಾರತೀಯ ಚಿತ್ರರಂಗಕ್ಕೆ ಚಿರಂಜೀವಿ ಅವರು ಕೊಡುಗೆ ನೀಡುತ್ತಾ ಬಂದಿದ್ದಾರೆ. 150ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಅವರ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ನಟನಾಗಿ, ನಿರ್ಮಾಪಕನಾಗಿ ಚಿರಂಜೀವಿ ಸಕ್ರಿಯರಾಗಿದ್ದಾರೆ. ಇಂದಿಗೂ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಪದ್ಮ ಭೂಷಣ, ನಂದಿ ಪ್ರಶಸ್ತಿ, ಫಿಲ್ಮ್ ಫೇರ್ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಈಗಾಗಲೇ ಚಿರಂಜೀವಿ ಅವರ ಮುಡಿಗೇರಿವೆ.