ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇಂದಿನಿಂದ ರಾತ್ರಿ 10ರವರೆಗೆ ಮೆಟ್ರೋ ಸಂಚಾರ…

89
firstsuddi

ಬೆಂಗಳೂರು : ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಇಂದಿನಿಂದ ಪ್ರತಿದಿನ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಮೆಟ್ರೋ ರೈಲುಗಳು ಸಂಚರಿಸಲಿವೆ.

ಈ ಬಗ್ಗೆ ನಿನ್ನೆ ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಅವರು ಮೆಟ್ರೋ ರೈಲು ಸಂಚಾರದ ಅವಧಿಯನ್ನು ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೆ ವಿಸ್ತರಣೆ ಮಾಡಲಾಗಿದೆ ತಿಳಿಸಿದ್ದಾರೆ.

ಕೊರೋನಾ ಹಿನ್ನೆಲೆ ಈ ಮೊದಲು ಮೆಟ್ರೋ ರೈಲು ಸಂಚಾರದ ಅವಧಿ ಬೆಳಗ್ಗೆ 7 ಗಂಟೆಯಿಂದ ಸಂಜೆ 8 ಗಂಟೆ ವರೆಗೆ ಮಾತ್ರ ಇತ್ತು. ಈಗ ಕೊರೋನಾ ಸೋಂಕು ಕಡಿಮೆಯಾಗಿರುವ ಹಿನ್ನಲೆ ಜನರ ಪ್ರಯಾಣಕ್ಕೆ ಅನುಕೂಲವಾಗುವಂತೆ ಮೆಟ್ರೋ ಕಾರ್ಯನಿರ್ವಹಿಸುವ ಅವಧಿಯನ್ನು ಪರಿಷ್ಕರಿಸಲಾಗಿದೆ.

ನೇರಳೆ ಮಾರ್ಗದಲ್ಲಿ ಬೈಯಪ್ಪನಹಳ್ಳಿ ಮತ್ತು ಮೈಸೂರು ರಸ್ತೆ ನಿಲ್ದಾಣದ ನಡುವೆ ರೈಲು ಸಂಚರಿಸಿದರೆ, ಹಸಿರು ಮಾರ್ಗದಲ್ಲಿ ಯಲಚೇನಹಳ್ಳಿ ಮತ್ತು ನಾಗಸಂದ್ರ ನಿಲ್ದಾಣಗಳ ನಡುವೆ ರೈಲು ಸಂಚರಿಸಲಿದೆ. ಅಲ್ಲದೇ ಪ್ರತಿ 5 ಮತ್ತು 10 ನಿಮಿಷಕ್ಕೊಮ್ಮೆ ಮೆಟ್ರೋ ರೈಲುಗಳು ಸಂಚರಿಸಲಿದೆ. ಆದರೆ ವಾರಾಂತ್ಯಗಳಲ್ಲಿ ಮೆಟ್ರೋ ರೈಲು ಸಂಚಾರವನ್ನು ಹೆಚ್ಚಿಸಬಹುದು ಅಥವಾ ಕಡಿತಗೊಳಿಸಬಹುದು ಎಂದು ಬಿಎಂಆರ್ ಸಿ ಸೂಚಿಸಿದೆ.

ಇನ್ನೂ ಮೆಟ್ರೋ ರೈಲಿನಲ್ಲಿ ಓಡಾಡುವ ಎಲ್ಲಾ ಪ್ರಯಾಣಿಕರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಇತರೆ ಕೋವಿಡ್ ನಿಯಮಗಳನ್ನು ಪಾಲಿಸಬೇಕಾಗಿ ತಿಳಿಸಿದೆ.