ಮೇಲುಕೋಟೆ ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣ: ಆರೋಪಿಯ ಬಂಧನ…

51
firstsuddi

ಮಂಡ್ಯ: ಇಲ್ಲಿನ ಮೇಲುಕೋಟೆ ಶಿಕ್ಷಕಿ ದೀಪಿಕಾ ನಾಪತ್ತೆ ಹಾಗೂ ಕೊಲೆ ಪ್ರಕರಣ ಸಂಬಂಧ ಹತ್ಯೆಯಾದ 30 ಗಂಟೆಯೊಳಗಾಗಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ನಿತೀಶ್ (21) ಬಂಧಿತ ಆರೋಪಿಯಾಗಿದ್ದಾನೆ. ಡಿವೈಎಸ್​​ಪಿ ಮುರಳಿ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ಮೇಲುಕೋಟೆ ಬೆಟ್ಟದ ತಪ್ಪಲಲ್ಲಿ ಮಾಣಿಕ್ಯನಹಳ್ಳಿ ಗ್ರಾಮದ ದೀಪಿಕಾಳನ್ನು (28) ಅದೇ ಗ್ರಾಮದ ನಿತೀಶ್ ಕೊಲೆ ಮಾಡಿ ಹೂತು ಹಾಕಿದ್ದ. ಶನಿವಾರ ಮಧ್ಯಾಹ್ನ ಶಾಲೆಯಿಂದ ತೆರಳಿದ್ದ ದೀಪಿಕಾ ನಿಗೂಢವಾಗಿ ನಾಪತ್ತೆಯಾಗಿದ್ದು, ಅಂದು ಸಂಜೆ ಬೆಟ್ಟದ ಹಿಂಭಾಗದ ರಸ್ತೆ ಸಮೀಪ ದೀಪಿಕಾ ಸ್ಕೂಟರ್ ಪತ್ತೆಯಾಗಿತ್ತು. ಅಲ್ಲದೆ ದೀಪಿಕಾಳನ್ನು ಎಳೆದಾಡುತ್ತಿದ್ದ ದೃಶ್ಯವನ್ನು ಬೆಟ್ಟದ ಮೇಲಿನಿಂದ ಪ್ರವಾಸಿಗರೊಬ್ಬರು ವೀಡಿಯೋ ಮಾಡಿದ್ದರು. ಇದಾದ ನಂತರ ಮೇಲುಕೋಟೆ ಠಾಣೆಗೆ ದೀಪಿಕಾ ಪೋಷಕರು ನಾಪತ್ತೆ ದೂರು ನೀಡಿದ್ದರು. ಸೋಮವಾರ ಸಂಜೆ ಬೆಟ್ಟದ ತಪ್ಪಲಿನಲ್ಲಿ ದೀಪಿಕಾ ಶವ ಪತ್ತೆಯಾಗಿತ್ತು.

ದೀಪಿಕಾರನ್ನು ಕೊಲೆಗೈದ ನಂತರ ಎರಡು ದಿನಗಳ ನಿತೇಶ್ ಗ್ರಾಮದಲ್ಲೇ ಇದ್ದನು. ಯಾವಾಗ ದೀಪಿಕಾಳ ಶವ ಪತ್ತೆಯಾಯ್ತೋ ಅಂದಿನಿಂದ ನಾಪತ್ತೆಯಾಗಿದ್ದನು. ಅಲ್ಲದೇ ದೀಪಿಕಾಗೆ ಕೊನೆಯದಾಗಿ ಈತನೇ ಫೋನ್ ಕಾಲ್ ಮಾಡಿದ್ದ. ದೀಪಿಕಾಳ ಪತಿ ಲೋಕೇಶ್, ನಿತೀಶ್ ಮೇಲೆ ಶಂಕೆ ವ್ಯಕ್ತಪಸಿಡಿದ್ದರು. ಈ ಅನುಮಾನದಿಂದ ನಾಪತ್ತೆಯಾಗಿದ್ದ ನಿತೀಶ್‌ನನ್ನು ಪೊಲೀಸರು ಹುಡುಕಾಟ ನಡೆಸಿದ್ದರು. ಇದೀಗ ನಿತೀಶ್‌ನನ್ನು ಬಂಧಿಸಿ ಮೇಲುಕೋಟೆ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದ್ದು, ಕೊಲೆ ಮಾಡಿರುವುದು ತಾನೇ ಎಂದು ಒಪ್ಪಿಕೊಂಡಿದ್ದಾನೆ. ಇಂದು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.