ಉಡುಪಿ: ರಾಜ್ಯದ ಪಶ್ಚಿಮ ಕರಾವಳಿಯ ಮಲ್ಪೆ ಬಂದರು ವ್ಯಾಪ್ತಿಯಲ್ಲಿ ಹಾರ್ಬರ್ ಕ್ರಾಫ್ಟ್ ನಿಯಮದಡಿ ನೀಡಲಾದ ಪರವಾನಿಗೆಯಂತೆ ಮಲ್ಪೆ ಬೀಚ್, ಸೀವಾಕ್ ಪ್ರದೇಶದಲ್ಲಿ ಓಡಾಟ ನಡೆಸುವ ಎಲ್ಲಾ ತರಹದ ಪ್ರವಾಸೀ ಬೋಟ್ ಚಟುವಟಿಕೆಗಳನ್ನು ಮೇ 16 ರಿಂದ ಸ್ಥಗಿತ ಗೊಳಿಸಲಾಗುವುದು.ಹೀಗಾಗಿ ಸೈಂಟ್ ಮೆರೀಸ್ ದ್ವೀಪಕ್ಕೆ ತೆರಳುವಂತಹ ಪ್ರವಾಸೀ ಬೋಟ್‌ಗಳ ಚಟುವಟಿಕೆಗಳು ಮೇ 16 ರಿಂದ ಸೆಪ್ಟೆಂಬರ್ 15ರವರೆಗೆ ತಾತ್ಕಾಲಿಕವಾಗಿ ನಿಲ್ಲಲ್ಲಿದೆ. ಹಾರ್ಬರ್ ಕ್ರಾಫ್ಟ್ ನಿಯಮಗಳ ಅನ್ವಯ ಇದನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಉಡುಪಿ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.