ಮೇ 4ಕ್ಕೆ ಮೋದಿ ಉಡುಪಿಗೆ ಆಗಮನ, ಯೋಗಿ ಆದಿತ್ಯನಾಥ್ ಭೇಟಿ ಸಾಧ್ಯತೆ…

55
firstsuddi

ಬೆಂಗಳೂರು: ಮೇ 4ರಂದು ಕರಾವಳಿ ಜಿಲ್ಲೆ ಉಡುಪಿಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭೇಟಿಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. ಯೋಗಿ ಆದಿತ್ಯನಾಥ್‌ ಕೂಡ ಚುನಾವಣಾ ಪ್ರಚಾರಕ್ಕೆ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕಾಂಗ್ರೆಸ್‌ ಕೂಡ ರಾಷ್ಟ್ರೀಯ ನಾಯಕರು, ಸ್ಟಾರ್‌ ಪ್ರಚಾರಕರನ್ನು ಜಿಲ್ಲೆಗೆ ಆಹ್ವಾನಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ.

ನಗರ ಅಥವಾ ಭೇಟಿಗೆ ಸೂಕ್ತವಾದ ಸ್ಥಳಗಳಲ್ಲಿ ಬೃಹತ್ ಕಾರ್ಯಕ್ರಮವನ್ನು ಏರ್ಪಡಿಸಲಾಗುತ್ತದೆ. ರಾಷ್ಟ್ರೀಯ ನಾಯಕರು ಜಿಲ್ಲಾ ಪಕ್ಷಕ್ಕೆ ವಿಷಯ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಯೋಗಿ ಆದಿತ್ಯನಾಥ್ ಅವರು ಪ್ರಧಾನಿಗೆ ಸಾಥ್ ನೀಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.