ಮೈತ್ರಿ ಸರ್ಕಾರ ಇಂದಾದರೂ ತಮ್ಮ ವಿಶ್ವಾಸ ಮತಯಾಚನೆಯನ್ನು ಮುಗಿಸಬೇಕು : ಅರವಿಂದ ಲಿಂಬಾವಳಿ…

283
firstsuddi

ಬೆಂಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಅರವಿಂದ ಲಿಂಬಾವಳಿ ಅವರು, ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಪಕ್ಷದ ರಾಜಕೀಯ ಬೆಳವಣಿಗೆಗಳನ್ನು ಕಂಡು ರಾಜಕೀಯ ಷಡ್ಯಂತ್ರ ಮಾಡುತ್ತಿದ್ದಾರೆ. ಕಾಂಗ್ರೆಸ್-ಜೆಡಿಎಸ್ ನಾಯಕರಿಂದ ನನ್ನ ವಿರುದ್ಧವೂ ಷಡ್ಯಂತ್ರ ನಡೆಯುತ್ತಿದೆ. ಯಾವ ಷಡ್ಯಂತ್ರ ಎಂದು ಸಮಯ ಬಂದಾಗ ತಿಳಿಸುತ್ತೇನೆ. ಮೈತ್ರಿ ನಾಯಕರೊಂದಿಗೆ ನಮ್ಮ ಪಕ್ಷದ ಇಬ್ಬರು ನಾಯಕರು ಸೇರಿ ಸಂಚು ರೂಪಿಸುತ್ತಿದ್ದಾರೆ. ಮೈತ್ರಿ ಸರ್ಕಾರ ಇಂದಾದರೂ ತಮ್ಮ ವಿಶ್ವಾಸ ಮತಯಾಚನೆಯನ್ನು ಮುಗಿಸಬೇಕು. ಈ ಬಗ್ಗೆ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಪತ್ರದ ಮೂಲಕ ಕುದುರೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ತಿಳಿಸಿದ್ದೇವೆ. ಮೈತ್ರಿ ಸರ್ಕಾರ ಬಿಜೆಪಿ ಶಾಸಕರಿಗೆ ಬೆದರಿಕೆ ಹಾಕುವುದು ಹಾಗೂ ಶಾಸಕರಿಗೆ ಆಮಿಷವೊಡ್ಡುವ ಕೆಲಸವನ್ನೂ ಕೂಡಾ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.