ಮೈಸೂರು : ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಲು ಇಂದು ಮೈಸೂರಿಗೆ ಆಗಮಿಸಿದ್ದಾರೆ.
ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ಮಡಿಕೇರಿಗೆ ಬರಲು ಸಿದ್ಧತೆ ನಡೆಸಲಾಗಿತ್ತು. ಆದರೆ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ಇಂದು ಮಧ್ಯಾಹ್ನ ಮೈಸೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸೋನಿಯಾ ಬಳಿಕ ಮೈಸೂರಿನ ವಿಂಡ್ ಫ್ಲವರ್ ಹೋಟೆಲ್ ಗೆ ತೆರಳಿದರು. ಬಳಿಕ ಸೋನಿಯಾ ಗಾಂಧಿ ಕಬಿನಿಗೆ ಪ್ರಯಾಣಿಸಿದರು.
ಅಕ್ಟೋಬರ್ 4 ಮತ್ತು 5ರಂದು ಆಯುಧಪೂಜೆ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆಗೆ ರಜೆಯಿದ್ದು, ಅಕ್ಟೋಬರ್ 6ರಿಂದ ಸೋನಿಯಾ ಗಾಂಧಿ ಯಾತ್ರೆಯಲ್ಲಿ ಭಾವಹಿಸಲಿದ್ದಾರೆ ಎಂದು ತಿಳಿದುಬಂದಿದೆ.










