ಮೈಸೂರಿನಲ್ಲಿ ಪೈಶಾಚಿಕ ಕೃತ್ಯ – ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್…

178
firstsuddi

ಮೈಸೂರು : ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಮೈಸೂರು ಹೊರವಲಯದ ಲಲಿತಾದ್ರಿಪುರ ಬಳಿ ನಿನ್ನೆ ರಾತ್ರಿ ನಡೆದಿದೆ. ಯುವತಿ ತನ್ನ ಪ್ರಿಯತಮನ ಜೊತೆ ಚಾಮುಂಡಿಬೆಟ್ಟಕ್ಕೆ ತೆರಳಿದ್ದಳು. ಬಳಿಕ ಅವರಿಬ್ಬರು ಬೈಕ್ ನಲ್ಲಿ ವಾಪಸ್ ಬರುವಾಗ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ನಿರ್ಜನ ಪ್ರದೇಶದಲ್ಲಿ ಮಧ್ಯಪಾನ ಮಾಡುತ್ತಿದ್ದ 6 ಮಂದಿ ದುಷ್ಕರ್ಮಿಗಳು ಯುವಕನಿಗೆ ಹಲ್ಲೆ ಮಾಡಿ ನಂತರ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಯುವತಿ ಉತ್ತರ ಪ್ರದೇಶ ಮೂದವಳು ಎನ್ನಲಾಗಿದೆ. ಅತ್ಯಾಚಾರದ ಬಳಿಕ ವಿದ್ಯಾರ್ಥಿನಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈ ಸಂಬಂಧ ಆಲನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.