ಮೈಸೂರು ಗ್ಯಾಂಗ್ ರೇಪ್ ಪ್ರಕರಣ : ಏಳನೇ ಆರೋಪಿ ಹತ್ತು ದಿನಗಳ ಕಾಲ ಪೊಲೀಸ್ ವಶಕ್ಕೆ…

81
firstsuddi

ಮೈಸೂರು : ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ  ಓರ್ವ ಬಾಲಾಪರಾಧಿ ಸೇರಿದಂತೆ ಆರು ಮಂದಿಯನ್ನು ಈಗಾಗಲೇ ಬಂಧಿಸಿದ್ದು, ತಲೆಮರೆಸಿಕೊಂಡಿದ್ದ ಏಳನೇ ಆರೋಪಿಯನ್ನು ತಮಿಳುನಾಡಿನ ತಿರುಪ್ಪೂರಿನಲ್ಲಿ ಬಂಧಿಸಿ, ನಿನ್ನೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಮೈಸೂರು ಪೊಲೀಸರು 10 ದಿನ ತಮ್ಮ ವಶಕ್ಕೆ ಪಡೆದಿದ್ದಾರೆ.

ಆಗಸ್ಟ್ 24 ರ ಪ್ರಕರಣ ನಡೆದ ರಾತ್ರಿ ಲಲಿತಾದ್ರಿಪುರದ ನಿರ್ಜನ ಪ್ರದೇಶದಲ್ಲಿ ಎಲ್ಲರೂ ಮದ್ಯಸೇವನೆ ಮಾಡುತ್ತಿದ್ದೆವು. ಆ ಸ್ಥಳದಲ್ಲಿ ಯುವಕ ಮತ್ತು ಯುವತಿ ಇದ್ದರು. ಆಗ ನಾವು ಹೆದರಿಸಿ ಹಣ ದೋಚಲು ಹೋದೆವು. ಆದರೆ, ಅವರ ಬಳಿ ಹಣ ಇರಲಿಲ್ಲ. ಆಗ ಯುವತಿಯನ್ನು ಎಳೆದೊಯ್ದು ಕೃತ್ಯ ನಡೆಸಿ ಪರಾರಿಯಾದೆವು ಎಂದು ಬಂಧಿತ ಏಳನೇ ಆರೋಪಿ ಪೊಲೀಸರ ತನಿಖೆ ವೇಳೆಯಲ್ಲಿ ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ.

ಈಗಾಗಲೇ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ಆರು ಆರೋಪಿಗಳನ್ನು ಅಗತ್ಯ ಬಿದ್ದರೆ ಮತ್ತೆ ಪೊಲೀಸ್ ಕಸ್ಟಡಿಗೆ ಪಡೆದು ಏಳನೇ ಆರೋಪಿ ನೀಡಿದ ಮಾಹಿತಿಯ ಬಗ್ಗೆ ಹೆಚ್ಚಿನ ತನಿಖೆ ನಡೆಸಲು ತನಿಖಾ ತಂಡ ಸಿದ್ಧತೆ ನಡೆಸಿದೆ ಎನ್ನಲಾಗಿದೆ.