ಮೈಸೂರು-ದರ್ಬಾಂಗ ಎಕ್ಸ್‍ಪ್ರೆಸ್ ರೈಲು ಅಪಘಾತ: ದೇವರ ದಯೆಯಿಂದ ದೊಡ್ಡ ಅನಾಹುತ ತಪ್ಪಿದೆ ಸಚಿವ ಸೋಮಣ್ಣ.

51

ಬೆಂಗಳೂರು: ನಿನ್ನೆ ರಾತ್ರಿ 8.30ರ ಸುಮಾರಿಗೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಕವರಪೇಟ್ಟೈನಲ್ಲಿ ನಡೆದ ರೈಲು ಅಪಘಾತ ಬಿಚ್ಚಿಬೀಳುವಂತಿತ್ತು. ಗೂಡ್ಸ್ ರೈಲಿಗೆ ಮೈಸೂರು-ದರ್ಬಾಂಗ ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿ ಭಾರಿ ಅನಾಹುತ ನಡೆದಿದೆ. ಆದ್ರೆ, ಅದೃಷ್ಟವಶಾತ್ ರೈಲಿನಲ್ಲಿದ್ದ ಅಷ್ಟೂ ಜನರ ಜೀವ ಉಳಿದಿದೆ. ಘಟನೆ ಸಂಬಂಧ ರೈಲ್ವೆ ಇಲಾಖೆ ರಾಜ್ಯ ಸಚಿವ ಸೋಮಣ್ಣ ಪ್ರತಿಕ್ರಿಯೆ ನೀಡಿದ್ದು ನಿನ್ನೆ ತುಂಬಾ ಒಳ್ಳೇ ದಿನ, ದೇವರ ದಯೆಯಿಂದ ಅಪಘಾತದಲ್ಲಿ ದೊಡ್ಡ ಅನಾಹುತ ತಪ್ಪಿದೆ ಎಂದರು. ರೈಲ್ವೆ ಅಪಘಾತದಲ್ಲಿ 19 ಜನರು ಗಾಯಗೊಂಡಿದ್ದಾರೆ. ರೈಲು ಅಪಘಾತದಲ್ಲಿ ಇಬ್ಬರಿಗೆ ಗಂಭೀರವಾಗಿ ಗಾಯವಾಗಿದ್ದು ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. 13 ಭೋಗಿಗಳು ಹಳಿ ತಪ್ಪಿದ್ದವು ಎಂದು ವಿ.ಸೋಮಣ್ಣ ತಿಳಿಸಿದರು. ತುಂಬಾ ಒಳ್ಳೇ ದಿನ, ಅಪಘಾತದಲ್ಲಿ ದೊಡ್ಡ ಅನಾಹುತವಾಗಿಲ್ಲ. ಎಲ್ಲ ಪ್ರಯಾಣಿಕರನ್ನೂ ಮೆಮು ಟ್ರೈನ್ ಮೂಲಕ ಶಿಫ್ಟ್ ಮಾಡಲಾಗಿದೆ. ಪ್ರಯಾಣಿಕರಿಗೆ ಊಟ, ವಸತಿ ವ್ಯವಸ್ಥೆ ಮಾಡಲಾಗಿದೆ. ಇಂದು ಅವರು ಎಲ್ಲೆಲ್ಲಿಗೆ ತಲುಪಬೇಕು ಅಲ್ಲಿಗೆ ವ್ಯವಸ್ಥೆ ಮಾಡಲಾಗುವುದು. ದೇವರ ದಯೆಯಿಂದ ದೊಡ್ಡ ಅನಾಹುತ ತಪ್ಪಿದೆ. ಯಾವ ಕಾರಣಕ್ಕೆ ಅಪಘಾತವಾಯ್ತು ಎಂದ ತನಿಖೆ ಆಗಬೇಕಿದೆ ಎಂದರು. ಇನ್ನು ನಿನ್ನೆಯೇ ಸ್ಥಳೀಯರು ರೈಲಿನಲ್ಲಿದ್ದವರನ್ನ ರಕ್ಷಿಸಿದ್ದಾರೆ. ತಮಿಳುನಾಡು ಪೊಲೀಸರು, ರೈಲ್ವೆ ಅಧಿಕಾರಿಗಳು, ಓಆಖಈ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಮಾಡಿದ್ದಾರೆ. ಗಾಯಗೊಂಡವರನ್ನ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಅಪಘಾತದಲ್ಲಿ ಎಲ್ಲಾ ಪ್ರಯಾಣಿಕರು ಸೇಫಾಗಿದ್ದಾರೆ. ಆದ್ರೂ, ಶ್ವಾನ ದಳದಿಂದ ಯಾರಾದ್ರೂ ನಾಪತ್ತೆಯಾಗಿದ್ದಾರಾ ಅಂತಾ ಹುಡುಕಾಟ ನಡೆದಿದೆ. ರೈಲ್ವೆ ಇಲಾಖೆ ಸಹಾಯವಾಣಿ ಕೂಡ ಓಪನ್ ಮಾಡಿದೆ. ಪ್ರಯಾಣಿಕರ ಬಗ್ಗೆ ಮಾಹಿತಿ ನೀಡುತ್ತಿದೆ. ಬದುಕುಳಿದ ಪ್ರಯಾಣಿಕರು ಘಟನೆಯ ಬಗ್ಗೆ ವಿವರಣೆ ನೀಡಿದ್ದಾರೆ.