ಮೈಸೂರು ದಸರಾಗೆ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ…

79
firstsuddi

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.

ಮೈಸೂರು ದಸರಾ ಆಚರಣೆಗೆ ಪ್ರತ್ಯೇಕ ಮಾರ್ಗಸೂಚಿ :

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಂತರ, ಮಾಸ್ಕ್ ಬಳಕೆ ಕಡ್ಡಾಯ. ವರ್ಚುವಲ್ ಮೂಲಕ ದಸರಾ ವೈಭವ ವೀಕ್ಷಣೆಗೆ ಅವಕಾಶ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ. ದಸರಾದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರಿಗೂ ನೆಗೆಟಿವ್ ರಿಪೋರ್ಟ್ ಜೊತೆಗೆ 1 ಡೋಸ್ ಲಸಿಕೆ ಕಡ್ಡಾಯ. ಕರ್ತವ್ಯ ನಿರತ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ, ಕಲಾವಿದರಿಗೆ ಇದು ಅನ್ವಯವಾಗಲಿದೆ.

ಚಾಮುಂಡಿ ಬೆಟ್ಟದಲ್ಲಿ ನಡೆಯುವ ದಸರಾ ಉದ್ಘಾಟನೆಗೆ ಕೇವಲ 100 ಮಂದಿಗೆ ಮಾತ್ರ ಅವಕಾಶ. ಸಂಜೆಯ ಸಾಂಸ್ಕ್ರತಿಕ ಕಾರ್ಯಕ್ರಮಗಳು 2 ಗಂಟೆ ಅವಧಿಯೊಳಗೆ ಮುಗಿಯಬೇಕು. ಸಾಂಸ್ಕ್ರತಿಕ ಕಾರ್ಯಕ್ರಮಗಳ ವೀಕ್ಷಣೆಗೆ 500 ಮಂದಿ ಮೀರದಂತೆ ನೋಡಿಕೊಳ್ಳಬೇಕು. ಅರಮನೆಯ ವಿದ್ಯುತ್ ದೀಪಾಲಂಕಾರ ವೀಕ್ಷಣೆಗೆ ರಾತ್ರಿ 7ರಿಂದ 9ರವರೆಗೆ ಅವಕಾಶ. ಐತಿಹಾಸಿಕ ಜಂಬೂ ಸವಾರಿ ದಿನ ಕೇವಲ 500 ಮಂದಿಗೆ ಅವಕಾಶ ನೀಡಲಾಗುತ್ತಿದೆ.

ರಾಜ್ಯಕ್ಕೆ ರೂಲ್ಸ್ ಗಳೇನು..?

ಇನ್ನೂ ಮೈಸೂರು ಹೊರತಾಗಿ ರಾಜ್ಯದ ಬೇರೆ ಕಡೆಗಳಲ್ಲಿ ನಡೆಸಲಾಗುವ ಆಚರಣೆಗೆ 400 ಕಿಂತ ಹೆಚ್ಚು ಜನ ಒಮ್ಮೆಲೆ ಸೇರಬಾರದು. ಸಾಮಾಜಿಕ ಅಂತರವಿಲ್ಲದೇ ನಡೆಸಲಾಗುವ ದಸರಾ ಕಾರ್ಯಕ್ರಮಗಳಿಗೆ ನಿಷೇಧ. ಸರ್ಕಾರ ಮತ್ತು ಜಿಲ್ಲಾಡಳಿತ ಹೊರಡಿಸಿರುವ ನಿಯಮಗಳನ್ನ ಪಾಲಿಸತಕ್ಕದು, ಕಾನೂನು ಸುವ್ಯವಸ್ಥೆಗೆ ಭಂಗ ಬರದಂತೆ ದಸರಾ ಹಬ್ಬ ಆಚರಣೆ ಮಾಡಬೇಕು ಎಂದು ಸೂಚಿಸಲಾಗಿದೆ.