ಮೈಸೂರು ದಸರಾ-ಜಂಬೂಸವಾರಿಯಲ್ಲಿ ಕೊರೊನಾ ಜಾಗೃತಿ ಮೂಡಿಸುವ ಸ್ತಬ್ಧಚಿತ್ರ ಪ್ರದರ್ಶನ…

123
firstsuddi

ಮೈಸೂರು : ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿ ಕೊರೊನಾ ಭೀತಿ ಹಿನ್ನೆಲೆ, ಬಹಳ ಸರಳವಾಗಿ ಅರಮನೆಯ ಆವರಣದಲ್ಲಿ ಜಂಬೂಸವಾರಿ ನಡೆಯಲಿದೆ. ಈ ಬಾರಿ ಜಂಬೂಸವಾರಿ ವೇಳೆ ಕೇವಲ 2 ಸ್ತಬ್ಧಚಿತ್ರಗಳನ್ನು ಪ್ರದರ್ಶನ ಮಾಡಲು ಅವಕಾಶ ನೀಡಲಾಗಿದೆ. ಮೈಸೂರು ಜಿಲ್ಲಾ ಪಂಚಾಯತಿ ವತಿಯಿಂದ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಸ್ತಬ್ಧಚಿತ್ರವನ್ನು ನಿರ್ಮಿಸಲಾಗಿದ್ದು, ವೈದ್ಯರು ಇಡೀ ವಿಶ್ವ, ಕುಟುಂಬವನ್ನು ಕಾಪಾಡುತ್ತಿದ್ದಾರೆ ಎಂಬ ಸಂದೇಶ ಸಾರುವ ಸ್ತಬ್ಧಚಿತ್ರವನ್ನು ನಿರ್ಮಿಸಲಾಗಿದೆ. ಹಾಗೂ ಇನ್ನೊಂದು ಅರಮನೆಯ ವಾದ್ಯಗೋಷ್ಠಿಯ ನಿರ್ಮಾಣ ಮಾಡಿದ್ದು, ಈ ಎರಡು ಸ್ತಬ್ಧಚಿತ್ರಗಳು ಮಾತ್ರ ಜಂಬೂಸವಾರಿ ಮೆರವಣಿಗೆಯಲ್ಲಿ ಪ್ರದರ್ಶನಗೊಳ್ಳಲಿದೆ.