ಮೈಸೂರು : ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ…

73
firstsuddi

ಮೈಸೂರು : ಜಿಲ್ಲೆಯ ತಿ.ನರಸೀಪುರ  ತಾಲೂಕಿನಲ್ಲಿ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ ಸಿಕ್ಕಿದೆ.

ತಿ.ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ಚಿರತೆ ಬೋನಿಗೆ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಅದನ್ನು ನೋಡಲು ಸುತ್ತಮುತ್ತಲ ಗ್ರಾಮಸ್ಥರು ಕುತೂಹಲದಿಂದ ನೆರೆದಿದ್ದರು.

ಸೆರೆ ಸಿಕ್ಕ ಚಿರತೆಯನ್ನು ಬೇರೆಡೆಗೆ ಸ್ಥಳಾಂತರಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾದರು. ಆದರೆ ಇದಕ್ಕೆ ಗ್ರಾಮಸ್ಥರು ಅವಕಾಶ ನೀಡಲು ನಿರಾಕರಿಸಿದರು. ಚಿರತೆಯನ್ನು ಸ್ಥಳದಲ್ಲೇ ಕೊಲ್ಲುವಂತೆ ಜನರು ಪಟ್ಟು ಹಿಡಿದರು. ಇದರಿಂದಾಗಿ ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು.

ಚಿರತೆ ಸ್ಥಳಾಂತರಕ್ಕೆ ಅನುವು ಮಾಡಿಕೊಡಿ ಎಂದು ಅರಣ್ಯಾಧಿಕಾರಿಗಳು ಜನರಿಗೆ ಮನವರಿಕೆ ಮಾಡಲು ಪ್ರಯತ್ನಿಸಿದರು. ನಂತರ ಅಧಿಕಾರಿಗಳ ಮಾತಿಗೆ ಜನರು ಸಮ್ಮತಿ ಸೂಚಿಸಿ, ಸ್ಥಳಾಂತರಕ್ಕೆ ಅವಕಾಶ ಮಾಡಿಕೊಟ್ಟರು.

ಹೊರಳಹಳ್ಳಿ ಗ್ರಾಮದಲ್ಲಿ ಕೆಲ ದಿನಗಳ ಹಿಂದೆಯಷ್ಟೇ ಚಿರತೆ ದಾಳಿಗೆ ಬಾಲಕನೊಬ್ಬ ಬಲಿಯಾಗಿದ್ದ. ಆದರೆ ಈಗ ಸೆರೆ ಸಿಕ್ಕಿರುವ ಚಿರತೆ, ಬಾಲಕನನ್ನು ಕೊಂದಿದ್ದಾ ಎಂಬುದು ಖಚಿತವಾಗಿಲ್ಲ.