ಮೈಸೂರು : ದುಷ್ಕರ್ಮಿಯೊಬ್ಬ 16 ವರ್ಷದ ಮಗನ ಮುಂದೆಯೇ ತಂದೆಯನ್ನು ಹತ್ಯೆ ಮಾಡಿದ ಘಟನೆ ನಗರದ ಬೃಂದಾವನ ಬಡಾವಣೆಯಲ್ಲಿ ನಡೆದಿದೆ.
ಸಂಪತ್ ಕುಮಾರ್(60) ಕೊಲೆಯಾದ ದುರ್ದೈವಿ. ಸಂಪತ್ ಕುಮಾರ್ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಅಗರಬತ್ತಿ ವ್ಯಾಪಾರಿಯಾಗಿದ್ದರು. ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ರಾಡ್ ನಿಂದ ಸಂಪತ್ ಕುಮಾರ್ ಮೇಲೆ ಭೀಕರವಾಗಿ ದಾಳಿ ನಡೆಸಿ ಹತ್ಯೆಗೈದಿದ್ದಾನೆ. ಶಿಕ್ಷಕಿಯಾಗಿರುವ ಸಂಪತ್ ಕುಮಾರ್ ಪತ್ನಿ ಗಾಯತ್ರಿ ಮನೆಯಲ್ಲಿ ಇಲ್ಲದಿದ್ದಾಗ ಈ ಘಟನೆ ನಡೆದಿದೆ.
ದುಷ್ಕರ್ಮಿ ಯಾರು, ಯಾವ ಉದ್ದೇಶಕ್ಕೆ ಈ ಕೃತ್ಯ ಎಸಗಿದ್ದಾನೆ ಎಂಬುದು ತಿಳಿದುಬಂದಿಲ್ಲ. ಘಟನೆ ಸಂಬಂಧ ಗಾಯತ್ರಿ ವಿವಿ ಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಆರಂಭಿಸಿದ್ದಾರೆ.










