ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ : ಬಂಧಿತ ಕಾಮುಕರೆಲ್ಲರೂ ಕೂಲಿಕಾರ್ಮಿಕರು!

221
firstsuddi

ಮೈಸೂರು : ಆಗಸ್ಟ್ 24 ಮಂಗಳವಾರ ರಾತ್ರಿ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರು ಪೊಲೀಸರು ಆರೋಪಿಗಳನ್ನ ವಶಕ್ಕೆ ಪಡೆದಿದ್ದು, ಬಂಧಿತ ಕಾಮುಕರೆಲ್ಲರೂ ಕೂಲಿಕಾರ್ಮಿಕರು ಎಂಬ ಮಾಹಿತಿ ತಿಳಿದುಬಂದಿದೆ.

ಕೃತ್ಯದ ಬಳಿಕ ಆರೋಪಿಗಳು ಹೊರರಾಜ್ಯದಲ್ಲಿ ತಲೆಮರೆಸಿಕೊಂಡಿದ್ದರು. ಇದೀಗ ವೈಜ್ಞಾನಿಕ ಸಾಕ್ಷ್ಯಾಧಾರಗಳ ಮೂಲಕ 5 ಆರೋಪಿಗಳನ್ನು ತಮಿಳುನಾಡಲ್ಲಿ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ತಮಿಳುನಾಡಿನ ಸತ್ಯಮಂಗಲ ಮೂಲದವರು ಎಂದು ಹೇಳಲಾಗುತ್ತಿದೆ. ಪೊಲೀಸರು ಆರೋಪಿಗಳನ್ನು ಮೈಸೂರಿಗೆ ಕರೆತಂದ ನಂತರ ಆರೋಪಿಗಳ ಹೆಚ್ಚಿನ ವಿಚಾರಣೆ ನಡೆಯಲಿದೆ ಎಂದು ತಿಳಿದುಬಂದಿದೆ. ಈಗಾಗಲೇ ಮೈಸೂರಿಗೆ ತೆರಳುತ್ತಿರುವ ಡಿಜಿಪಿ ಪ್ರವೀಣ್ ಸೂದ್ ಅವರು ಇಂದು ಸಂಜೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುವ ಸಾಧ್ಯತೆಗಳಿವೆ.